ADVERTISEMENT

ಕಲಬುರ್ಗಿ: ಸಂತೆಗಳಲ್ಲೂ ಮತದಾನದ ಜಾಗೃತಿ!

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2018, 11:22 IST
Last Updated 26 ಏಪ್ರಿಲ್ 2018, 11:22 IST
ಕಲಬುರ್ಗಿಯ ಕಣ್ಣಿ ಮಾರುಕಟ್ಟೆಯಲ್ಲಿ ಬುಧವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕುರಿತ ಕರಪತ್ರಗಳನ್ನು ವಿತರಿಸಲಾಯಿತು
ಕಲಬುರ್ಗಿಯ ಕಣ್ಣಿ ಮಾರುಕಟ್ಟೆಯಲ್ಲಿ ಬುಧವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕುರಿತ ಕರಪತ್ರಗಳನ್ನು ವಿತರಿಸಲಾಯಿತು   

ಕಲಬುರ್ಗಿ: ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಸಂತೆ ಪ್ರದೇಶಗಳಲ್ಲಿ ಕಡ್ಡಾಯ ಹಾಗೂ ನೈತಿಕ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.

ಬುಧವಾರ ಕಣ್ಣಿ ತರಕಾರಿ ಮಾರುಕಟ್ಟೆ ಹಾಗೂ ಬಸ್ ನಿಲ್ದಾಣದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ತಂಡವು ಕರಪತ್ರಗಳನ್ನು ಹಂಚಿತು. ಮೇ 12ರಂದು ವಿಧಾನಸಭಾ ಚುನಾವಣೆಯ ಮತದಾನ ನಡೆಯ ಲಿದ್ದು, ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು. ಮತದಾನಕ್ಕಾಗಿ ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೇ ನೈತಿಕ ಮತದಾನ ಮಾಡಬೇಕು. ಮತದಾನ ಎಲ್ಲರ ಮೂಲಭೂತ ಹಕ್ಕು ಮತ್ತು ಕರ್ತವ್ಯವಾಗಿದೆ ಎಂದು ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT