ADVERTISEMENT

ಕಲಬೆರಕೆ ಆಹಾರ: ಇರಲಿ ಎಚ್ಚರ

​ಪ್ರಜಾವಾಣಿ ವಾರ್ತೆ
Published 2 ಜುಲೈ 2018, 12:52 IST
Last Updated 2 ಜುಲೈ 2018, 12:52 IST

ಕಲಬುರ್ಗಿ: ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಗಳಾದರೂ ಪರಿಸರದ ಏರುಪೇರಿನಿಂದ ಮತ್ತು ಕಲಬೆರಕೆ ಆಹಾರ ಸೇವನೆಯಿಂದ ಪ್ರತಿವ್ಯಕ್ತಿಯ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ವಿ. ಪಾಟೀಲ ಕಳವಳ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಆರೋಗ್ಯ  ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಯೋಜಿ ಸಿದ್ದ ಕಾನೂನು ಅರಿವು ನೆರವು ಕಾರ್ಯ ಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬ ವ್ಯಕ್ತಿ  ಸುಂದರ ಬದುಕು ಸಾಕಾರಗೊಳಿಸಿಕೊಳ್ಳಲು ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯ ಎಂದರು.

ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಚಾರ್ಯ ಡಾ.ಶಿವರಾಜ ಸಜ್ಜನಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ನ್ಯಾಯವಾ ದಿಗಳ ಸಂಘದ ಅಧ್ಯಕ್ಷ ಸೂರ್ಯಕಾಂತ ಆರ್. ಭೀಮಳ್ಳಿ, ಡಾ.ಮೀನಾ ಪದ್ಕಿ ಮತ್ತು ನ್ಯಾಯವಾದಿ ಸರಸಿಜಾ ರಾಜನ್ ಉಪನ್ಯಾಸ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಝಾಕೀರ್ ಅನ್ಸಾರಿ ಸ್ವಾಗತಿಸಿದರು. ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಶರಣಬಸಪ್ಪ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.