ADVERTISEMENT

‘ಕುಡಿಯುವ ನೀರಿನ ಸೌಲಭ್ಯಕ್ಕೆ ₹50ಲಕ್ಷ’

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2017, 8:29 IST
Last Updated 10 ನವೆಂಬರ್ 2017, 8:29 IST

ಜೇವರ್ಗಿ: ‘ತಾಲ್ಲೂಕಿನ ಕೋಳಕೂರ ಗ್ರಾಮಕ್ಕೆ ಕುಡಿಯುವ ನೀರು ಸರಬುರಾಜು ಯೋಜನೆ ಕಾಮಗಾರಿಗೆ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ(ಎನ್.ಆರ್.ಡಿ.ಡಬ್ಲೂ.ಪಿ)ಅಡಿಯಲ್ಲಿ ₹50ಲಕ್ಷ ಅನುದಾನ ಬಿಡುಗಡೆ ಗೊಳಿಸಲಾಗಿದೆ. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಲಾಗುವುದು’ ಎಂದು ಶಾಸಕ ಡಾ.ಅಜಯಸಿಂಗ್ ಹೇಳಿದರು.

ಬುಧವಾರ ತಾಲ್ಲೂಕಿನ ಕೋಳಕೂರ ಗ್ರಾಮದಲ್ಲಿ 2015–16ನೇ ಸಾಲಿನ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆಯಿಂದ ₹6ಲಕ್ಷ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿದೆ. ತಾಲ್ಲೂಕಿನ ಪ್ರತಿ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಲು ಸರ್ಕಾರದ ವಿವಿಧ ಯೋಜನೆ ಅಡಿಯಲ್ಲಿ ಅನುದಾನ ಬಿಡುಗಡೆ ಗೊಳಿಸಲಾಗಿದೆ.

ಕಾಲಮಿತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಉಪ ವಿಭಾದ ಎಂಜಿನಿಯರ್ ಗಳಿಗೆ ಸೂಚಿಸಲಾಗಿದೆ’ ಎಂದು ಶಾಸಕ ಡಾ.ಅಜಯಸಿಂಗ್ ತಿಳಿಸಿದರು.

ADVERTISEMENT

ಕೋಳಕೂರ ಜಿಲ್ಲಾ ಪಂಚಾಯಿತಿ ಸದಸ್ಯ ಶಿವರಾಜ ಪಾಟೀಲ ರದ್ದೇವಾಡಗಿ, ತಾಲ್ಲೂಕು ಪಂಚಾಯಿತಿ ಸದಸ್ಯ ಗುರುಶಾಂತಪ್ಪ ಸಿಕೇದ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಹಣಮಂತರಾಯಗೌಡ ಗೌನಳ್ಳಿ, ಸಿದ್ಧಲಿಂಗರೆಡ್ಡಿ ಪಾಟೀಲ ಇಟಗಿ, ರುಕುಂಪಟೇಲ್ ಇಜೇರಿ, ರಾಜಶೇಖರ ಸೀರಿ, ಮಲ್ಲಿಕಾರ್ಜುನ ಸಾಹು ಆಲೂರ, ಮರೆಪ್ಪ ಸರಡಗಿ, ಗ್ರಾಮೀಣ ಕುಡಿಯುವ ನೀರು ಸರಬುರಾಜು ಹಾಗೂ ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚಂದುಲಾಲ್ ರಾಠೋಡ್, ಕಿರಿಯ ಎಂಜಿನಿಯರ್ ಅಜ್ಮೀರ್ ಅಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.