ADVERTISEMENT

‘ಕೈಗಾರಿಕಾ ಪಾರ್ಕ್‌ಗೆ ಮತ್ತಷ್ಟು ಭೂಮಿ’

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2017, 6:00 IST
Last Updated 18 ಡಿಸೆಂಬರ್ 2017, 6:00 IST
ಕಲಬುರ್ಗಿಯ ಮಹಿಳಾ ಕೈಗಾರಿಕಾ ಪಾರ್ಕ್‌ನ ಸಾಮಾನ್ಯ ಸೌಲಭ್ಯ ಕೇಂದ್ರದ ಕಟ್ಟಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು
ಕಲಬುರ್ಗಿಯ ಮಹಿಳಾ ಕೈಗಾರಿಕಾ ಪಾರ್ಕ್‌ನ ಸಾಮಾನ್ಯ ಸೌಲಭ್ಯ ಕೇಂದ್ರದ ಕಟ್ಟಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು   

ಕಲಬುರ್ಗಿ: ‘ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಲು ಉದ್ದೇಶಿತ ಮಹಿಳಾ ಕೈಗಾರಿಕಾ ಪಾರ್ಕ್‌ಗಳಿಗೆ ಕಡಿಮೆ ದರದಲ್ಲಿ ಮತ್ತಷ್ಟು ಭೂಮಿಯನ್ನು ಒದಗಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು ಕೆ–ಲ್ಯಾಂಪ್‌ ಸಹಯೋಗದಲ್ಲಿ ನಂದೂರಿನ ಕೈಗಾರಿಕಾ ಪ್ರದೇಶದ ಮಹಿಳಾ ಕೈಗಾರಿಕಾ ಪಾರ್ಕ್‌ನ ಸಾಮಾನ್ಯ ಸೌಲಭ್ಯ ಕೇಂದ್ರದ ಕಟ್ಟಡಕ್ಕೆ ಇಲ್ಲಿನ ಐವಾನ್‌–ಇ–ಶಾಹಿ ಅತಿಥಿಗೃಹದ ಆವರಣದಲ್ಲಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ಕಲಬುರ್ಗಿಯ ಕೈಗಾರಿಕಾ ಪಾರ್ಕ್‌ಗೆ ಈಗಾಗಲೇ 50 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಹೆಚ್ಚುವರಿ ಭೂಮಿಯ ಅಗತ್ಯವಿದ್ದಲ್ಲಿ ತಿಳಿಸಬೇಕು. ಅತಿ ಕಡಿಮೆ ದರದಲ್ಲಿ ಅದನ್ನು ಸಹ ಒದಗಿಸಲು ಸರ್ಕಾರ ಬದ್ಧ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕೈಗಾರಿಕೆಗಳನ್ನು ಆರಂಭಿಸಬೇಕು. ಉದ್ಯಮಿಗಳಾಗಿ ರೂಪುಗೊಳ್ಳಬೇಕು’ ಎಂದರು.

ADVERTISEMENT

ಅಂಕಿ–ಅಂಶ
50 ಎಕರೆ ವಿಸ್ತೀರ್ಣದ ಕೈಗಾರಿಕಾ ಪಾರ್ಕ್‌

₹7ಕೋಟಿ ವೆಚ್ಚದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ

230 ಕೈಗಾರಿಕಾ ನಿವೇಶನಗಳ ರಚನೆ

200 ಮಹಿಳಾ ಉದ್ದಿಮೆಗಳ ನಿರೀಕ್ಷೆ

* * 

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಕೈಗಾರಿಕಾ ಪಾರ್ಕ್‌ಗಳು ನೆರವಾಗಲಿವೆ. ಕೀಳರಿಮೆ ತಪ್ಪಿಸಲು ಹಾಗೂ ಆರ್ಥಿಕವಾಗಿ ಸಶಕ್ತರನ್ನಾಗಿಸುವುದು ರಾಜ್ಯ ಸರ್ಕಾರದ ಆಶಯ
ಸಿದ್ದರಾಮಯ್ಯ, ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.