ADVERTISEMENT

‘ಡಾಟಾ ಎಂಟ್ರಿ ಆಪರೇಟರ್: ಮೀಸಲಾತಿ ಕಲ್ಪಿಸಿ’

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2017, 6:11 IST
Last Updated 19 ನವೆಂಬರ್ 2017, 6:11 IST

ಕಲಬುರ್ಗಿ: ‘ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆದರೆ, ಇದರಲ್ಲಿ  371( ಜೆ)ಕಲಂ ಅಡಿ ಯಾವುದೇ ಮೀಸಲಾತಿ ನಿಗದಿಪಡಿಸಿಲ್ಲ’ ಎಂದು ಹೈದರಾಬಾದ್‌ ಕರ್ನಾಟಕ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ವೈಜನಾಥ ಪಾಟೀಲ ದೂರಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘371 ( ಜೆ) ಕಲಂ ಪ್ರಕಾರ ಹೈದರಾಬಾದ್‌ ಕರ್ನಾಟಕ ಭಾಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲು ಸರ್ಕಾರ ಆದೇಶ ನೀಡಿದೆ. ಆದರೆ, ಈ ಆದೇಶ ಉಲ್ಲಂಘಿಸಿ ಗ್ರಾಮ ಪಂಚಾಯಿತಿಗಳಿಗೆ ಡಾಟಾ ಎಂಟ್ರಿ ಆಪರೇಟರ್ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಈ ಭಾಗದವರಿಗೆ ಅನ್ಯಾಯ ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದಾಗಿ ತಿಳಿಸಿದ ಅವರು, ‘ಸಿದ್ದರಾಮಯ್ಯ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಕಾರ್ಯದರ್ಶಿ ಮತ್ತು ಹಿರಿಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಹೈದರಾಬಾದ್‌ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು. ಕೂಡಲೇ ಅಧಿಸೂಚನೆ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು. ಮುಖಂಡರಾದ ಎಂ.ಬಿ ಅಂಬಲಗಿ, ಗುರುಶಾಂತ ಪಟ್ಟೇದಾರ ಡಾ. ಶರಣಪ್ಪ ಗಿರಿ, ಶಿವಶಂಕರಪ್ಪ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.