ADVERTISEMENT

ಡಿಸೆಂಬರ್‌ 7ರಿಂದ ರಾಷ್ಟ್ರೀಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2017, 8:36 IST
Last Updated 25 ನವೆಂಬರ್ 2017, 8:36 IST

ಕಲಬುರ್ಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ ಹಾಗೂ ಪ್ರಸಾರಾಂಗ ವತಿಯಿಂದ ಡಿಸೆಂಬರ್ 7, 8 ಮತ್ತು 9ರಂದು ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ‘ಸಾಮಾಜಿಕ ಸೌಹಾರ್ದತೆಯೆಡೆಗೆ ಸಾಹಿತ್ಯ’ ಕುರಿತ ರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ಸಾಹಿತಿ ಕುಂ.ವೀರಭದ್ರಪ್ಪ ಉದ್ಘಾಟಿಸುವರು. ಬೆಂಗಳೂರಿನ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಬಸವರಾಜ ಸಾದರ, ಸಿಂಡಿಕೇಟ್ ಸದಸ್ಯ ಸಂಗನಗೌಡ ಪೊಲೀಸ್ ಪಾಟೀಲ, ವಿದ್ಯಾ ವಿಷಯಕ ಪರಿಷತ್ ಸದಸ್ಯ ನಾಗೇಶ ಕೊಳ್ಳಿ, ಕುಲಸಚಿವ ಪ್ರೊ.ದಯಾನಂದ ಅಗಸರ, ಮೌಲ್ಯಮಾಪನ ಕುಲಸಚಿವ ಪ್ರೊ.ಡಿ.ಎಂ.ಮದರಿ, ಹಣಕಾಸು ಅಧಿಕಾರಿ ಪ್ರೊ.ರಾಜನಾಳಕರ್ ಲಕ್ಷ್ಮಣ ಭಾಗವಹಿಸುವರು.

ಕುಲಪತಿ ಪ್ರೊ.ಎಸ್.ಆರ್.ಆರ್.ನಿರಂಜನ ಅಧ್ಯಕ್ಷತೆ ವಹಿಸುವರು. ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎಚ್.ಟಿ.ಪೋತೆ ಆಶಯ ನುಡಿಗಳನ್ನಾಡುವರು. ಡಿ.9ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು, ಸಾಹಿತಿ ಡಾ. ಅಮರೇಶ ನುಗಡೋಣಿ ಸಮಾರೋಪ ಭಾಷಣ ಮಾಡುವರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.