ADVERTISEMENT

‘ಮಕ್ಕಳ ಏಳಿಗೆಯೇ ಆದ್ಯತೆಯಾಗಲಿ’

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2017, 9:05 IST
Last Updated 15 ನವೆಂಬರ್ 2017, 9:05 IST

ಸೇಡಂ: ‘ಇಂದಿನ ಮಕ್ಕಳೇ ನಾಳೆಯ ಭವ್ಯ ಭಾರತದ ನಿರ್ಮಾತೃಗಳಾಗಿದ್ದು, ಶಿಕ್ಷಕರು ಮಕ್ಕಳ ಏಳಿಗೆಯ ಧೋರಣೆಯನ್ನು ನಿತ್ಯಪಾಠ ಬೋಧನೆ ಮಾಡಬೇಕು’ ಎಂದು ಎಸ್‌ಡಿಎಂಸಿ ಅಧ್ಯಕ್ಷ ರಮೇಶ ಹಡಪದ ಹೇಳಿದರು.

ತಾಲ್ಲೂಕಿನ ಕುರಕುಂಟಾ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆಚರಿಸಲಾದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರಸ್ತುತ ದಿನಗಳಲ್ಲಿ ಶಿಕ್ಷಣ ಕೊಡಿಸುವುದು ಪ್ರತಿಯೊಬ್ಬ ಪಾಲಕರ ಆದ್ಯ ಕರ್ತವ್ಯವಾಗಬೇಕು. ಗ್ರಾಮೀಣ ಭಾಗದ ಜನರು ತಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಮುಂದೆ ಬರಬೇಕು. ಅಲ್ಲದೆ, ರಾಜ್ಯ ಸರ್ಕಾರ ಶಿಕ್ಷಣದ ಏಳಿಗೆಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದರ ಲಾಭವನ್ನು ಪಡೆದುಕೊಳ್ಳುವಲ್ಲಿ ಪ್ರತಿಯೊಬ್ಬರು ಮುಂದೆ ಬರಬೇಕು’ ಎಂದು ತಿಳಿಸಿದರು.

ADVERTISEMENT

ಕಾರ್ಯಕ್ರಮದಲ್ಲಿ ಮಕ್ಕ ಳನ್ನು ವೇದಿಕೆಯ ಮೇಲೆ ಮುಖ್ಯ ಅತಿಥಿಗಳನ್ನಾಗಿ ಹಾಗೂ ಕಾರ್ಯಕ್ರಮದ ಅಧ್ಯಕ್ಷರನ್ನಾಗಿ ಮಾಡಿ ಮಕ್ಕಳಿಂದ ಭಾಷಣ ಮಾಡಿಸಲಾಯಿತು. ಪಂಡಿತ ಜವಾಹರಲಾಲ್ ನೆಹರೂ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಶಾಲೆಯ ಮುಖ್ಯಶಿಕ್ಷಕ ಬಷೀರುದ್ದೀನ್ ಗಾರಂಪಳ್ಳಿ, ಧರ್ಮರಾವ, ಪ್ರೇಮಾ, ಕಮಲಾಕ್ಷಿ, ಲಕ್ಷ್ಮಿ, ಸುನಿತಾ ಉಪಸ್ಥಿತರಿದ್ದರು.

ಮುಧೋಳ ಗುರುಕುಲ ಶಾಲೆ: ತಾಲ್ಲೂಕಿನ ಮುಧೋಳ ಗ್ರಾಮದ ಗುರುಕುಲ ಪ್ರಾಥಮಿಕ ಶಾಲೆಯಲ್ಲಿ ಜವಾಹರಲಾಲ್ ನೆಹರೂ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಕ್ಕಳ ದಿನವನ್ನು ಆಚರಿಸಲಾಯಿತು.

ದಿನಾಚರಣೆಯ ನಿಮಿತ್ತ ಏರ್ಪಡಿಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹು ಮಾನ ವಿತರಿಸಲಾಯಿತು. ಮುಖ್ಯಶಿಕ್ಷಕ ಭಾರತಜಿ ಮರಾಠ, ಶಿಕ್ಷಕಿ ಸಂಗಮ್ಮ, ಯಮುನಾ, ಪ್ರಿಯಾಂಕಾ, ಖರುನ್ನಿಸಾ, ಭಾವನಾ, ನೇಹಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.