ADVERTISEMENT

ಮುಸ್ಲಿಂ ಮುಖಂಡರ ಮೇಲೆ ನಡೆದ ಹಲ್ಲೆಗೆ ಖಂಡನೆ: ಪಿಎಫ್‌ಐ ಕಾರ್ಯಕರ್ತರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2017, 5:45 IST
Last Updated 6 ಏಪ್ರಿಲ್ 2017, 5:45 IST
ಮಂಗಳೂರಿನಲ್ಲಿ ಪಿಎಫ್‌ಐ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಕಲಬುರ್ಗಿಯ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ಮಾಡಿದರು
ಮಂಗಳೂರಿನಲ್ಲಿ ಪಿಎಫ್‌ಐ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಕಲಬುರ್ಗಿಯ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ಮಾಡಿದರು   

ಕಲಬುರ್ಗಿ: ಮಂಗಳೂರಿನಲ್ಲಿ ಪಿಎಫ್‌ಐ ಕಾರ್ಯಕರ್ತರು ಮತ್ತು ಮುಸ್ಲಿಂ ಮುಖಂಡರ ಮೇಲೆ ನಡೆದ ಹಲ್ಲೆ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ಮಾಡಿದರು.

ಅಹ್ಮದ್ ಖುರೇಷಿಯನ್ನು ಪೊಲೀಸರು ಅಕ್ರಮವಾಗಿ ಬಂಧಿಸಿ ಅವರ ಮೇಲೆ  ಹಲ್ಲೆ ಮಾಡಿದ್ದಾರೆ. ಈ ಘಟನೆ ಖಂಡಿಸಿ ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಪೊಲೀಸರು ವಿನಾಕಾರಣ ಲಾಠಿಪ್ರಹಾರ ಮಾಡಿದ್ದಾರೆ. ಆದ್ದರಿಂದ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಲಾಠಿ ಪ್ರಹಾರದಿಂದಾಗಿ 65ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, 9 ಜನರಿಗೆ ಗಂಭೀರ ಗಾಯಗಳಾಗಿವೆ. ಈ ಮಧ್ಯೆ ಪೊಲೀಸರು ಪ್ರತಿಭಟನಾನಿರತ ಮುಸ್ಲಿಂ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಅಕ್ರಮವಾಗಿ ಬಂಧಿಸಿದ್ದಾರೆ.

ADVERTISEMENT

ಆದ್ದರಿಂದ ಸಿಸಿಬಿ ಇನ್‌ಸ್ಪೆಕ್ಟರ್ ಸುನಿಲ್ ನಾಯ್ಕ್ ಮತ್ತು ಸಬ್ ಇನ್‌ಸ್ಪೆಕ್ಟರ್ ಶಾಮ್ ಸುಂದರ ಸೇರಿದಂತೆ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.


ಪಿಎಫ್‌ಐ ರಾಜ್ಯ ಕಾರ್ಯದರ್ಶಿ ಅಬ್ದುಲ್ ರಹೀಮ್ ಪಟೇಲ್, ಜಿಲ್ಲಾ ಅಧ್ಯಕ್ಷ ಮೊಹಮ್ಮದ್ ಮೊಹ್ಸಿನ್, ಕಾರ್ಯದರ್ಶಿ ಶೇಖ್ ಅಜೀಜ್, ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಜಿಲ್ಲಾ ಅಧ್ಯಕ್ಷ ಸೈಯದ್ ಜಕೀರ್, ಕಾರ್ಯದರ್ಶಿ ಶಾಹಿದ್ ನಸೀರ್, ಸೈಯದ್ ಅಲೀಮ್ ಇಲಾಹಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.