ADVERTISEMENT

ಮೂರು ಮೌಲಾನಾ ಆಜಾದ್ ಮಾದರಿ ಶಾಲೆ ಮಂಜೂರು

​ಪ್ರಜಾವಾಣಿ ವಾರ್ತೆ
Published 15 ಜುಲೈ 2017, 7:26 IST
Last Updated 15 ಜುಲೈ 2017, 7:26 IST

ಜೇವರ್ಗಿ: ‘ತಾಲ್ಲೂಕಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೂರು ಮೌಲಾನಾ ಆಜಾದ್ ಮಾದರಿ ಶಾಲೆಗಳು ಮಂಜೂರಾಗಿವೆ. ಜೇವರ್ಗಿ ಪಟ್ಟಣ ಹಾಗೂ ತಾಲ್ಲೂಕಿನ ಯಡ್ರಾಮಿ ಮತ್ತು ಇಜೇರಿಯಲ್ಲಿ ಈ ಶಾಲೆಗಳು ಕಾರ್ಯನಿರ್ವಹಿಸಲಿವೆ’ ಎಂದು ಶಾಸಕ ಡಾ. ಅಜಯಸಿಂಗ್ ಹೇಳಿದರು.

ಗುರುವಾರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ನೂತನವಾಗಿ ಆರಂಭಿಸಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯನ್ನು ಉದ್ಘಾಟಿಸಿ ‘‘ಅವರು ಮಾತನಾಡಿದರು.

‘ಅಲ್ಪಸಂಖ್ಯಾತರ ಕಚೇರಿ ಹೊಸದಾಗಿ ಮಂಜೂರಿಯಾಗಿದ್ದು, ಕಚೇರಿಯಲ್ಲಿ ಮಾಹಿತಿ ಕೇಂದ್ರದ ತಾಲ್ಲೂಕು ಅಧಿಕಾರಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿನ ಮಕ್ಕಳಿಗೆ ನೀಡುವಂತೆ ಮೌಲಾನಾ ಆಜಾದ್ ಶಾಲೆಗಳ ಮಕ್ಕಳಿಗೆ ಮಧ್ಯಾಹ್ನ ಉಪಾಹಾರ ಹಾಗೂ ಹಾಲು ನೀಡಲಾಗುವುದು. ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ₹2ಕೋಟಿ ವೆಚ್ಚದಲ್ಲಿ ಎರಡು ಮೆಟ್ರಿಕ್ ನಂತರದ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ’ ಎಂದರು.

ADVERTISEMENT

ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಮಾನೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಕಾರಿ ಶಕುಂತಲಾ, ಮುಖಂಡರಾದ ರುಕುಂಪಟೇಲ್ ಇಜೇರಿ, ಕಾಸಿಂಪಟೇಲ್ ಮುದವಾಳ, ಚಂದ್ರಶೇಖರ ಹರನಾಳ, ರಾಜಶೇಖರ ಸೀರಿ, ಅಬ್ದುಲ್ ರಹಿಮಾನ್ ಪಟೇಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.