ADVERTISEMENT

‘ರೋಗ ನಿವಾರಣೆಗೆ ಆರೋಗ್ಯ ಶಿಬಿರ ಸಹಕಾರಿ’

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2017, 8:47 IST
Last Updated 13 ನವೆಂಬರ್ 2017, 8:47 IST

ಕಲಬುರ್ಗಿ: ‘ಬದಲಾದ ಜೀವನಶೈಲಿ ಮತ್ತು ಒತ್ತಡದ ಬದುಕಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ. ಇದರ ನಿವಾರಣೆಗೆ ಆರೋಗ್ಯ ಶಿಬಿರ ಸಹಕಾರಿ’ ಎಂದು ಶ್ರೀಗುರು ವಿದ್ಯಾಪೀಠದ ಅಧ್ಯಕ್ಷ ಬಸವರಾಜ ಡಿಗ್ಗಾವಿ ಹೇಳಿದರು.

ಸಾರ್ವಜನಿಕ ಹಿತರಕ್ಷಣ ಸಂಘ ಶನಿವಾರ ವಿಶ್ವೇಶ್ವರಯ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
‘ಕಾಯಿಲೆ ಬರುವ ಮುನ್ನವೇ ಎಚ್ಚರ ವಹಿಸಿದರೆ ಆಸ್ಪತ್ರೆ, ಗುಳಿಗೆ ಮುಂತಾದ ಕಷ್ಟಗಳಿಂದ ಪಾರಾಗಬಹುದು. ಹಳ್ಳಿಗಳಲ್ಲೂ ಜನರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕಾದ ಅಗತ್ಯವಿದೆ’ ಎಂದು ಹೇಳಿದರು.

ಆರೋಗ್ಯ ಇಲಾಖೆ, ಆಯುಷ್‌, ಎಚ್‌ಸಿಜಿ ಕ್ಯಾನ್ಸರ್‌ ಕೇಂದ್ರದ ವೈದ್ಯರು 300ಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆ ಮಾಡಿದರು. ಪಾಲಿಕೆ ಸದಸ್ಯ ಹುಲಿಗೆಪ್ಪ ಕನಕಗಿರಿ, ಮುಖಂಡ ಉಮೇಶ ಶೆಟ್ಟಿ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ರಾಜಕುಮಾರ ಕುಲಕರ್ಣಿ, ಆಯುಷ್‌ ವೈದ್ಯಾಧಿಕಾರಿ ಡಾ.ಚಿದಾನಂದ, ಎಚ್‌ಸಿಜಿ ಕ್ಯಾನ್ಸರ್‌ ಕೇಂದ್ರದ ಆರೋಗ್ಯ ಅಧಿಕಾರಿ ಡಾ.ನಂದೀಶ ಜೀವಣಗಿ, ಡಾ.ಸೇಗೆದಾರ, ಕಾಶಿನಾಥ ಅಣದುರೆ, ಎಂ.ಎಂ.ಕಾಡಾದಿ, ನಂದಕುಮಾರ ಜಾಜಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.