ADVERTISEMENT

ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ ಜಾಗೃತಿ

ಕಲಬುರ್ಗಿಯಲ್ಲಿ ಹೆಚ್ಚುವರಿ ಎಸ್ಪಿ ಜಯಪ್ರಕಾಶ್‌ರಿಂದ ಜನಜಾಗೃತಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2017, 5:59 IST
Last Updated 3 ಫೆಬ್ರುವರಿ 2017, 5:59 IST
ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ ಜಾಗೃತಿ
ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತಾ ಜಾಗೃತಿ   

ಕಲಬುರ್ಗಿ: ಶಾಲಾ ಮಕ್ಕಳಿಂದ ವಾಹನ ಸವಾರರಿಗೆ ಗುಲಾಬಿ ಹೂ ಕೊಡಿಸುವ ಮೂಲಕ ಸಂಚಾರ ನಿಯಮಗಳ ಕುರಿತು ನಗರದ ಸಂಚಾರ ಪೊಲೀಸರು ವಿವಿಧೆಡೆ ಜನಜಾಗೃತಿ ಮೂಡಿಸುತ್ತಿರು­ವುದು ಗುರುವಾರ ಗಮನ ಸೆಳೆಯಿತು.

ಸರ್ದಾರ್‌ ವಲ್ಲಭಬಾಯ್‌ ಪಟೇಲ್‌ ವೃತ್ತದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಯಪ್ರಕಾಶ್‌ ಅವರು ಜನಜಾಗೃತಿಗೆ ಚಾಲನೆ ನೀಡಿದರು.
‘ಬೈಕ್‌ ಸವಾರರು ಇನ್ನು ಮುಂದೆ ಹೆಲ್ಮೆಟ್ ಕಡ್ಡಾಯವಾಗಿ ಧರಿಸಲೇಬೇಕು. ನಿಯಮ ಪಾಲಿಸದಿದ್ದರೆ ದಂಡ ವಿಧಿಸುವುದು ಅನಿವಾರ್ಯವಾಗುತ್ತದೆ. ಸಂಚಾರಿ ನಿಯಮಗಳನ್ನು ಕಡ್ಡಾಯ­ವಾಗಿ ಪಾಲಿಸಲು ಮತ್ತು ಹೆಲ್ಮೆಟ್ ಧರಿಸಿ ಬೈಕ್‌ ಚಲಾಯಿಸಲು ವಾಹನ ಸವಾರರಿಗೆ ಶಾಲಾ ಮಕ್ಕಳಿಂದ ಗುಲಾಬಿ ಹೂ ಕೊಡಿಸಿ ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ತಿಳಿಸಿದರು.

ಆರಂಭದಲ್ಲಿ ಸೂಕ್ತ ತಿಳಿವಳಿಕೆ ಹಾಗೂ ಜನಜಾಗೃತಿ ಮೂಡಿಸಲಾಗು­ವುದು. ಆನಂತರ ದಂಡ ವಿಧಿಸು­ವುದನ್ನು ಆರಂಭಿಸಲಾಗುವುದು ಎಂದು ಹೇಳಿದರು.
ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ನಗರದಲ್ಲಿ ದ್ವಿಚಕ್ರವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗುತ್ತಿದೆ ಎಂದರು.
ಸಂಚಾರ ಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಶಾಂತಿನಾಥ, ಪಿಎಸ್ಐ ಶೌಕತ್ ಅಲಿ, ಸಿಬ್ಬಂದಿ ಮತ್ತು ಶಾಲಾ ಮಕ್ಕಳು ಜಾಗೃತಿ ಅಭಿಯಾನದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.