ADVERTISEMENT

ವಿದ್ಯುತ್ ದರ ಏರಿಕೆ: ಖಂಡನೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2018, 12:52 IST
Last Updated 2 ಜುಲೈ 2018, 12:52 IST

ಗುಲ್ಬರ್ಗ: ಪ್ರತಿ ಯೂನಿಟ್‌ ವಿದ್ಯುತ್‌ಗೆ 32 ಪೈಸೆ ದರ ಹೆಚ್ಚಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ಸೂಪರ್ ಮಾರ್ಕೆಟ್‌ನಲ್ಲಿ ಮಂಗಳವಾರ ಪಂಜಿನ ಮೆರವಣಿಗೆ ನಡೆಸಿದರು.

ಕೆಲವೇ ದಿನಗಳ ಹಿಂದೆ ಬಸ್ ಪ್ರಯಾಣ ದರ ಏರಿಸಿರುವ ಸರ್ಕಾರ, ಇದೀಗ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನಸಾಮಾನ್ಯರಿಗೆ ಶಾಕ್ ನೀಡಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಕೂಡಲೇ ದರ ಏರಿಕೆ ಹಿಂಪಡೆಯಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಪರಶುರಾಮ ನಸಲವಾಯಿ, ಪದಾಧಿಕಾರಿಗಳಾದ ಸುನೀಲ್ ಮಹಾಗಾಂವಕರ್, ಬಸವರಾಜ ರಾಠೋಡ, ಪವನ ದೇಶಮುಖ, ಅಲೋಕ ಸೋಮ್ಯಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.