ADVERTISEMENT

‘ಹೈ.ಕ.ದ ಎಲ್ಲ ಬ್ಯಾರೇಜ್ ಗೇಟ್‌ಗಳ ರಿಪೇರಿ’

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2017, 5:41 IST
Last Updated 21 ಸೆಪ್ಟೆಂಬರ್ 2017, 5:41 IST
ಎಂ.ಬಿ. ಪಾಟೀಲ
ಎಂ.ಬಿ. ಪಾಟೀಲ   

ಕಲಬುರ್ಗಿ: ‘ಹೈದರಾಬಾದ್‌ ಕರ್ನಾಟಕದಲ್ಲಿರುವ ಎಲ್ಲ ಬ್ಯಾರೇಜ್‌ಗಳ ಗೇಟ್‌ಗಳ ತ್ವರಿತ ಮತ್ತು ದೀರ್ಘಾವಧಿಯ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.

‘ಭೀಮಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಟ್ಟಿದ್ದರಿಂದ ಜಿಲ್ಲೆಯ ಕಲ್ಲೂರ (ಬಿ) ಮತ್ತು ಚಿನಮಳ್ಳಿ ಮಧ್ಯದ ಬ್ರಿಜ್‌ ಕಂ ಬ್ಯಾರೇಜ್‌ ಕೊಚ್ಚಿಕೊಂಡು ಹೋಗಿದೆ. ನೀರು ಕಡಿಮೆಯಾದ ನಂತರ ಅದರ ರಿಪೇರಿಗೆ ಕ್ರಮ ಕೈಗೊಳ್ಳುತ್ತೇವೆ. ರೈತರ ಬೆಳೆ ಹಾನಿ ಸಮೀಕ್ಷೆ ನಡೆಸಿ ಪರಿಹಾರವನ್ನೂ ನೀಡುತ್ತೇವೆ’ ಎಂದು ಇಲ್ಲಿ ಹೇಳಿದರು.

‘ಮಹಾರಾಷ್ಟ್ರ ತನ್ನ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುವಾಗ ಸರಿಯಾದ ಮುನ್ಸೂಚನೆ ನೀಡುತ್ತಿಲ್ಲ. ಅಗತ್ಯ ಮುನ್ಸೂಚನೆ ನೀಡಬೇಕು ಮತ್ತು ಏಕಾಏಕಿ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡದಂತೆ ನಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರೊಂದಿಗೆ ಚರ್ಚಿಸಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.