ADVERTISEMENT

₹21.63 ಕೋಟಿ ಸಬ್ಸಿಡಿ ಪಾವತಿ

​ಪ್ರಜಾವಾಣಿ ವಾರ್ತೆ
Published 24 ಮೇ 2017, 6:23 IST
Last Updated 24 ಮೇ 2017, 6:23 IST

ಕಲಬುರ್ಗಿ: ಜಿಲ್ಲೆಯಲ್ಲಿ 2016ನೇ ಸಾಲಿನ ಸೆಪ್ಟೆಂಬರ್‌ನಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಯಾಗಿರುವ ಬೆಳೆಗಳ ರೈತರಿಗೆ ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ₹21.63 ಕೋಟಿ ಬೆಳೆ ವಿಮೆ ಪರಿಹಾರ (ಇನ್‌ಪುಟ್ ಸಬ್ಸಿಡಿ) ಪಾವತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಉಜ್ವಲ್‌ಕುಮಾರ ಘೋಷ್ ತಿಳಿಸಿದ್ದಾರೆ.

ಜಿಲ್ಲೆಯ ಏಳು ತಾಲ್ಲೂಕುಗಳ 60,900 ರೈತರ ಬ್ಯಾಂಕ್ ಖಾತೆಗಳಿಗೆ ಆನ್‌ಲೈನ್‌ ಮೂಲಕ ಜಮಾ ಮಾಡಲಾಗಿದೆ. ಪರಿಹಾರ ತಂತ್ರಾಂಶದ ಮೂಲಕ ಇನ್‌ಪುಟ್ ಸಬ್ಸಿಡಿ ಹಣ ರೈತರ ಖಾತೆಗಳಿಗೆ ಜಮಾ ಆಗಿರುವ ಬಗ್ಗೆ ರೈತರು ನೀಡಿರುವ ಮೊಬೈಲ್ ಸಂಖ್ಯೆಗೆ ಸಂದೇಶ ಸಹ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಆಧಾರ್ ಸಂಖ್ಯೆ ಜೋಡಣೆ ಆಗದೇ ಇರುವ ಕೆಲವು ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಜಮಾ ಆಗುವಲ್ಲಿ ವಿಳಂಬವಾಗಿದೆ. ಅಂತಹ ರೈತರ ಸಬ್ಸಿಡಿ ಮೊತ್ತವನ್ನು ಸಹ ಬ್ಯಾಂಕ್ ಖಾತೆಗಳಿಗೆ ಆದಷ್ಟು ಬೇಗ ಆನ್‌ಲೈನ್‌ ಮೂಲಕ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.