ADVERTISEMENT

3 ಜಿಲ್ಲೆ, 3 ವರ್ಷ: 962 ಸಾವು!

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2017, 9:07 IST
Last Updated 21 ನವೆಂಬರ್ 2017, 9:07 IST

ಕಲಬುರ್ಗಿ: ಈಶಾನ್ಯ ವಲಯ ವ್ಯಾಪ್ತಿಯ ಕಲಬುರ್ಗಿ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸುಗಮ ಮತ್ತು ಸುರಕ್ಷಿತ ಸಂಚಾರ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ನ. 24ರಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್, ನಾಲ್ಕು ಚಕ್ರ ವಾಹನ ಚಾಲಕರು ಸೀಟ್ ಬೆಲ್ಟ್ ಮತ್ತು ಆಟೊ ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು. ಸಾರ್ವಜನಿಕರು ವಾಹನ ಚಾಲನೆ ಪರವಾನಗಿ, ಆರ್‌ಸಿ ಪುಸ್ತಕ ಮತ್ತು ವಿಮೆ ಪ್ರತಿಯನ್ನು ತಮ್ಮ ಬಳಿ ಇರಿಸಿಕೊಳ್ಳುವಂತೆ ಜಾಗೃತಿ ಮೂಡಿಸ ಲಾಗುತ್ತದೆ.

‘ಈಶಾನ್ಯ ವಲಯ ವ್ಯಾಪ್ತಿಯ ಮೂರು ಜಿಲ್ಲೆಗಳಲ್ಲಿ ಮೂರು ವರ್ಷಗಳಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 962 ಜನರು ಪ್ರಾಣ ಕಳೆದುಕೊಂಡಿದ್ದಾರೆ. 3,145 ಜನರು ತೀವ್ರ ಗಾಯಗೊಂಡಿದ್ದಾರೆ. ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸದ್ದರಿಂದ ಹೆಚ್ಚಿನ ಜನರು ಮೃತಪಟ್ಟಿದ್ದಾರೆ. ಹೀಗಾಗಿ ಈ ಬಗ್ಗೆ ಜಾಗೃತಿ ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಈಶಾನ್ಯ ವಲಯ ಐಜಿಪಿ ಅಲೋಕಕುಮಾರ್ ತಿಳಿಸಿದ್ದಾರೆ.

ADVERTISEMENT

‘ಹೆಲ್ಮೆಟ್ ರಹಿತ ವಾಹನ ಚಾಲನೆ, ಕುಡಿದ ಮತ್ತಿನಲ್ಲಿ ವಾಹನ ಚಾಲನೆ, ವಾಹನ ಚಾಲನೆಯಲ್ಲಿ ಮೊಬೈಲ್ ಬಳಕೆ, ಮೂವರ ಸವಾರಿ, ಅತೀ ವೇಗದಿಂದ ವಾಹನ ಚಾಲನೆ, ನಿರ್ಲಕ್ಷ್ಯದಿಂದ ವಾಹನ ಚಾಲನೆಗೆ ದಂಡ ವಿಧಿಸಲಾಗುತ್ತಿದೆ. ಈ ನಿಯಮಗಳನ್ನು ಉಲ್ಲಂಘಿಸಿದ 1.12 ಲಕ್ಷ ಪ್ರಕರಣಗಳು ದಾಖಲಾಗಿವೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.