ADVERTISEMENT

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕನ ಬಂಧನ

​ಪ್ರಜಾವಾಣಿ ವಾರ್ತೆ
Published 8 ಜುಲೈ 2018, 20:16 IST
Last Updated 8 ಜುಲೈ 2018, 20:16 IST
ಮಲ್ಲನಗೌಡ
ಮಲ್ಲನಗೌಡ   

ಕಲಬುರ್ಗಿ: ಏಳನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಖಾಸಗಿ ಶಾಲೆಯ ಮುಖ್ಯ ಶಿಕ್ಷಕ ಮಲ್ಲನಗೌಡ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

‘ಶುಕ್ರವಾರ ಸಂಜೆ ಶಾಲೆ ಬಿಟ್ಟ ಬಳಿಕ ಕುರ್ಚಿಗಳನ್ನು ತೆಗೆದಿಡುವ ನೆಪಮಾಡಿ ನಮ್ಮ ಮಗಳನ್ನು ಶಾಲೆಯಲ್ಲೇ ಉಳಿಸಿಕೊಂಡಿದ್ದಾನೆ. ಆ ಬಳಿಕ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ’ ಎಂದು ವಿದ್ಯಾರ್ಥಿನಿಯ ಪಾಲಕರು ದೂರು ದಾಖಲಿಸಿದ್ದಾರೆ.

‘ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಆರೋಪಿ ವಿರುದ್ಧ ಪೋಸ್ಕೊ ಕಾಯ್ದೆಯಡಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.