ADVERTISEMENT

ಅಲ್ಪಸಂಖ್ಯಾತರಿಗೆ ಸೌಲಭ್ಯ ತಲುಪಲಿ

​ಪ್ರಜಾವಾಣಿ ವಾರ್ತೆ
Published 29 ಮೇ 2017, 7:28 IST
Last Updated 29 ಮೇ 2017, 7:28 IST

ಮಡಿಕೇರಿ: ಅಲ್ಪಸಂಖ್ಯಾತರ ಅಭಿವೃದ್ಧಿ ಗಾಗಿ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಅನೇಕ ಕಾರ್ಯಕ್ರಮಗಳನ್ನು ಮೀಸಲಿಟ್ಟಿದೆ. ಅವುಗಳಿಗೆ ಕ್ರಿಯಾ ಯೋಜನೆ ತಯಾರಿಸಿ ಸಕಾಲದಲ್ಲಿ ಅವರಿಗೆ ತಲುಪಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜಾ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪ್ರಧಾನ ಮಂತ್ರಿಯವರ 15 ಅಂಶ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.    

‘ಶಾಲಾ ಶೈಕ್ಷಣಿಕ ಸೌಲಭ್ಯ ಹೆಚ್ಚಿಸು ವುದು, ಸ್ವ–ಉದ್ಯೋಗ ಕೈಗೊಳ್ಳಲು ಅನುವು ಮಾಡುವುದು, ಗ್ರಾಮೀಣ ವಾಸ ಯೋಜನೆಯಲ್ಲಿ ಸಮಾನ ಪಾಲು ನೀಡುವ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಅಲ್ಪಸಂಖ್ಯಾತ ಬಡಜನರ ಅಭಿವೃದ್ಧಿಗೆ ಶ್ರಮಿಸಿ’ ಎಂದು ಸೂಚಿಸಿದರು.

ಅಲ್ಪಸಂಖ್ಯಾತರಿಗಾಗಿ ಮೀಸಲಿ ಟ್ಟಿರುವ ಅನುದಾನ ಹಾಗೂ ಯೋಜನೆ ಗಳನ್ನು ಸಮರ್ಪಕವಾಗಿ ತಲುಪಿಸುವ ನಿಟ್ಟಿನಲ್ಲಿ ಸ್ಥಳೀಯವಾಗಿ ಹೆಚ್ಚಿನ ಮಾಹಿತಿ ಒದಗಿಸಬೇಕು ಎಂದು ಸೂಚಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಸಿಇಒ ಚಾರುಲತಾ ಸೋಮಲ್, ಅಲ್ಪಸಂಖ್ಯಾ ತರು, ಹಿಂದುಳಿದವರು, ಪರಿಶಿಷ್ಟರ ಜನ ಸಂಖ್ಯೆಗೆ ಅನುಗುಣವಾಗಿ ಅನುದಾನ ವನ್ನು ಮೀಸಲಿಟ್ಟು, ಬಡ ಜನರ ಒಳಿತಿಗೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು. 

ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಕೆ.ವಿ.ಸುರೇಶ್, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಲ್ಲೇಸ್ವಾಮಿ, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಸಿ.ನಾಗರಾಜು, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಪ್ರಭು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.