ADVERTISEMENT

ಕಲ್ಯಾಣ ಸಮಿತಿಯಲ್ಲಿ ಹೆಸರು ನೋಂದಾಯಿಸಿ

​ಪ್ರಜಾವಾಣಿ ವಾರ್ತೆ
Published 21 ಮೇ 2017, 9:21 IST
Last Updated 21 ಮೇ 2017, 9:21 IST

ಮಡಿಕೇರಿ: ‘ವಿದೇಶದಲ್ಲಿ ನೆಲೆಸಿರು ವವರು ಕಲ್ಯಾಣ ಸಮಿತಿಯಲ್ಲಿ ಹೆಸರು ನೋಂದಣಿ ಮಾಡಿಸಿಕೊಳ್ಳುವುದು ಅಗತ್ಯ’ ಎಂದು ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಮನವಿ ಮಾಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. 

‘ರಾಜ್ಯದ 5 ಲಕ್ಷಕ್ಕೂ ಹೆಚ್ಚು ಜನರು ವಿದೇಶದಲ್ಲಿ ನೆಲೆಸಿದ್ದಾರೆ. ಇಂತಹ ಅನಿವಾಸಿ ಕನ್ನಡಿಗರ ಸುರಕ್ಷತೆ, ಭದ್ರತೆ ನಿಟ್ಟಿನಲ್ಲಿ ರಾಯಭಾರಿ ಕಚೇರಿಗಳು ಹಾಗೂ ಅನಿವಾಸಿ ಭಾರತೀಯ ಸಮಿತಿ ಕಾರ್ಯ ನಿರ್ವಹಿಸುತ್ತಿದೆ. ಆದ್ದರಿಂದ, ಅನಿವಾಸಿ ಭಾರತೀಯರು ಜಿಲ್ಲಾಮಟ್ಟದ ಸಮಿತಿಯಲ್ಲಿ ಹೆಸರು ನೋಂದಣಿ ಮಾಡಿಸಬೇಕು’ ಎಂದು ಕೋರಿದರು. 

‘ಉದ್ಯೋಗ, ಶಿಕ್ಷಣಕ್ಕಾಗಿ ಜಿಲ್ಲೆ ಯಿಂದ ಎಷ್ಟು ಮಂದಿ ವಿದೇಶಕ್ಕೆ ವಲಸೆ ಹೋಗಿದ್ದಾರೆ ಎಂಬ ಮಾಹಿತಿ ಸಂಗ್ರಹಿಸ ಲಾಗುತ್ತದೆ. ಎಲ್ಲರೂ ಸಹಕರಿಸಬೇಕು. ತುರ್ತು ಸಂದರ್ಭದಲ್ಲಿ ವಾಪಸ್‌ ಕರೆ ತರಲು ರಾಯಭಾರಿ ಕಚೇರಿ ಜೊತೆ ಸಂಪರ್ಕಹೊಂದಲು ಇದು ಸಹಕಾರಿ’ ಎಂದು ಹೇಳಿದರು.

ADVERTISEMENT

‘ಅನಿವಾಸಿ ಭಾರತೀಯ ಕನ್ನಡಿಗ ಎಂಬ ವೇದಿಕೆಯಡಿ ನೋಂದಣಿ ಮಾಡಿ ಸಿದಾಗ ಸರ್ಕಾರದ ಸೌಲಭ್ಯ ತಲುಪಿಸಲು ಸಹಕಾರಿ’ ಎಂದು ಸಲಹೆ ಮಾಡಿದರು. ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಉಪ ವಿಭಾಗಾಧಿಕಾರಿ ಡಾ.ನಂಜುಂಡೇ ಗೌಡ, ತಹಶೀಲ್ದಾರ್ ಕುಸುಮಾ, ಮಹದೇವ ಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.