ADVERTISEMENT

ಕೋಟ್ಪಾ: ಪರಿಣಾಮಕಾರಿ ಅನುಷ್ಠಾನ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2017, 6:43 IST
Last Updated 13 ಏಪ್ರಿಲ್ 2017, 6:43 IST

ಮಡಿಕೇರಿ:  ಕೊಡಗು ಜಿಲ್ಲೆಯಲ್ಲಿ ಕೋಟ್ಪಾ– 2003 ಕಾಯಿದೆಯನ್ನು ಅತ್ಯಂತ ಪರಿಣಾಮಕಾರಿ ಆಗಿ ಅನು ಷ್ಠಾನಕ್ಕೆ ತರಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಸೂಚಿಸಿದರು.ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಆಶ್ರಯದಲ್ಲಿ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಸಾರ್ವಜನಿಕ ಸ್ಥಳಗಳಲ್ಲಿ ಧೂಮ ಪಾನ ಮಾಡಬಾರದು. ಧೂಮಪಾನ ಮಾಡುವುದು ಕಂಡುಬಂದಲ್ಲಿ ದಂಡ ವನ್ನು ವಿಧಿಸಬೇಕು. ಈ ಬಗ್ಗೆ ಸಾರ್ವ ಜನಿಕರಲ್ಲಿ ಜನಜಾಗೃತಿ ಮೂಡಿಸಬೇಕಿದೆ ಎಂದು ಸೂಚಿಸಿದರು.ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ, ಶಾಲಾ–ಕಾಲೇಜುಗಳಲ್ಲಿ, ನಾಮಫಲಕ ಅಳವಡಿಸಬೇಕು.

ಧೂಮಪಾನ ನಿಷೇಧ ಸಂಬಂಧಿಸಿ ದಂತೆ ದಂಡದ ಮೊತ್ತವನ್ನು ಸರ್ಕಾರದ ರಾಜಸ್ವ ಲೆಕ್ಕ ಶೀರ್ಷಿಕೆಗೆ ಜಮೆ ಮಾಡ ಬೇಕು. ಸ್ಥಳೀಯ ಮಟ್ಟದಲ್ಲಿ ಧೂಮ ಪಾನ ನಿಷೇಧ ಸಂಬಂಧಿಸಿದಂತೆ ಕಾರ್ಯ ಕ್ರಮಗಳನ್ನು ಆಯೋಜಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದರು.ಜಿಲ್ಲಾ ಕಾನೂನು ಸೇವಾ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು ಮಾತನಾಡಿ, ಪರಿಶುದ್ಧ ಪರಿಸರ ದಲ್ಲಿ ಜೀವಿಸುವ ಹಕ್ಕು ಎಲ್ಲರಿಗೂ ಇದೆ. ಸಾರ್ವಜನಿಕ ಪ್ರದೇಶಗಳ ಪರಿಸರಗಳನ್ನು ಕಾಪಾಡುವುದು ನಮ್ಮ ಜವಾಬ್ದಾರಿ ಯಾಗಿದೆ.

ADVERTISEMENT

ಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ತಂಬಾಕು ಉತ್ಪನ್ನಗಳ ಮಾರಾಟ ಕಾನೂನು ಉಲ್ಲಂಘನೆ ಯಾಗಿದ್ದು ಶಾಲಾಕಾಲೇಜುಗಳು ಇದನ್ನು ಸೂಚಿಸುವ ಫಲಕಗಳನ್ನು ವಿದ್ಯಾಸಂಸ್ಥೆ ಗಳ ಆವರಣದ ಹೊರಗಡೆ ಅಳವಡಿಸು ವುದು ಕಡ್ಡಾಯ ಎಂದು ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಒ.ಆರ್. ಶ್ರೀರಂಗಪ್ಪ, ಶಾಲಾ, ಕಾಲೇಜು, ಸಾರ್ವ ಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸಬೇಕಿದೆ ಎಂದು ಅವರು ಹೇಳಿದರು.

ತಂಬಾಕು ನಿಯಂತ್ರಣ ಘಟಕದ ರಾಜ್ಯ ಮಟ್ಟದ ಸಲಹೆಗಾರರಾದ ಪ್ರಭಾ ಕರ್, ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕ ರಾದ ಡಾ.ಹನುಮಂತಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ವೇಕ್ಷಣಾ ಅಧಿಕಾರಿ ಡಾ.ಶಿವಕುಮಾರ್, ಡಿವೈಎಸ್‌ಪಿ ಛಬ್ಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮಮ್ತಾಜ್, ಜಿಲ್ಲಾ ಆಸ್ಪತ್ರೆಯ ಸರ್ಜನ್ ಅಬ್ದುಲ್ ಅಜೀಜ್, ವೈದ್ಯಕೀಯ ಕಾಲೇ ಜಿನ ಪ್ರಾಧ್ಯಾಪಕರಾದ ಡಾ.ಕಾಮತ್, ಜಿಲ್ಲಾ ಆಸ್ಪತ್ರೆಯ ಡಾ.ಮಂಜುನಾಥ್ ಪ್ರಸಾದ್, ಇನ್ಸ್‌ಪೆಕ್ಟರ್ ಮೇದಪ್ಪ, ಭರತ್, ಕೆಎಸ್‌ಆರ್‌ಟಿಸಿ ಟ್ರಾಫಿಕ್ ಇನ್ಸ್‌ ಪೆಕ್ಟರ್ ಈರಸಪ್ಪ, ಕಾರ್ಮಿಕ ಇಲಾಖೆಯ ಅಧಿಕಾರಿ ಯತ್ನಟ್ಟಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ರಾದ ಜಯಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ವೇಕ್ಷಣಾ ಘಟಕದ ಮಂಜುನಾಥ್, ಉಮೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.