ADVERTISEMENT

ಕ್ರಿಯಾಶೀಲತೆಯಿಂದ ಉತ್ತಮ ಭವಿಷ್ಯ

ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವ ಸಮಾರೋಪ ಸಮಾರಂಭ; ಪ್ರೊ.ಲೋಕೇಶ್ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 11 ಮೇ 2017, 8:58 IST
Last Updated 11 ಮೇ 2017, 8:58 IST
ಕುಶಾಲನಗರ: ವಿದ್ಯಾರ್ಥಿಗಳು ಜೀವನ ದಲ್ಲಿ ಸಾಮಾಜಿಕ ಅಂಶಗಳನ್ನು ಅಳ ವಡಿಸಿಕೊಂಡು ಕಲಿಕೆಯ ಜೊತೆಗೆ ಸನ್ನಡತೆ ಮತ್ತು ಕ್ರಿಯಾಶೀಲತೆ ಮೈಗೂಡಿ ಸಿಕೊಂಡರೆ ಉತ್ತಮ ಭವಿಷ್ಯ ರೂಪಿಸಿ ಕೊಳ್ಳಲು ಸಾಧ್ಯ  ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಕೆ.ಎಂ.ಲೋಕೇಶ್ ಹೇಳಿದರು.
 
ಸಮೀಪದ ಚಿಕ್ಕಅಳುವಾರದ ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದಲ್ಲಿ 2016-17ನೇ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಉತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 
 
ದ್ವೇಷ ಮತ್ತು ಹಗೆ ಸಾಧಿಸುವ ಗುಣ ಸ್ವಭಾವದಿಂದ ದೂರವಿರುವ ಮೂಲಕ ಶಿಸ್ತು, ಸಂಯಮ ಮತ್ತು ಏಕಾಗ್ರತೆಯನ್ನು ಬೆಳಸಿಕೊಂಡು ಸತತ ಅಭ್ಯಾಸ ಮತ್ತು ಪರಿಶ್ರಮದಿಂದ ಉನ್ನತ ಸಾಧನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
 
ಜಿಲ್ಲಾ ಪಂಚಾಯಿತಿ ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಎಸ್.ಶ್ರೀನಿವಾಸ್, ‘ಶೈಕ್ಷಣಿಕ ಚಟುವಟಿಕೆಯೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವ ಮೂಲಕ ಉತ್ತಮ ಸಾಧನೆ ಮಾಡಬೇಕು’ ಎಂದರು. 
 
ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ಪಿ.ಎಲ್.ಧರ್ಮ ಅಧ್ಯಕ್ಷತೆ ವಹಿಸಿದ್ದರು. ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎನ್.ದೇವರಾಜ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ಚಂದ್ರ ಶೇಖರ್ ಜೋಷಿ, ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಡಾ. ಕೇಶವಮೂರ್ತಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಗಂಗಾಧರಪ್ಪ, ಹಿರಿಯ ಗ್ರಾಮಸ್ಥ ಕರೀಗೌಡ ಉಪಸ್ಥಿತರಿದ್ದರು.
 
ಇದೇ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡೆಗಳಲ್ಲಿ ವಿಜೇತ ರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.