ADVERTISEMENT

ಕ್ರೀಡೆಯಿಂದ ಮಾನಸಿಕ ದೃಢತೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2016, 11:24 IST
Last Updated 29 ಆಗಸ್ಟ್ 2016, 11:24 IST

ನಾಪೋಕ್ಲು: ಕ್ರೀಡೆಯಿಂದ ಮಾನಸಿಕ ದೃಢತೆ ಹೆಚ್ಚುವುದರೊಂದಿಗೆ ಸದೃಢ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನ ಹೇಳಿದರು.

ಸಮೀಪದ ಮೂರ್ನಾಡಿನ  ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ  ಆಯೋಜಿಸಲಾಗಿದ್ದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿದರು.ವಿದ್ಯಾರ್ಥಿಗಳು ಪ್ರತಿಯೊಬ್ಬರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಿಂದ ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬಹುದು ಎಂದರು.

ದೈಹಿಕ ಶಿಕ್ಷಕ ಪರಿವೀಕ್ಷಕ ಮೃತ್ಯುಂಜಯ ಮಾತನಾಡಿ, ವಿದ್ಯೆ ವಿನಯ ನೀಡಿದರೆ ಕ್ರೀಡೆ ಆರೋಗ್ಯ ನೀಡುತ್ತದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿ ಮೂಡಿಸಿಕೊಂಡಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಹಲವು ಅವಕಾಶಗಳು ದೊರಕುತ್ತಿದ್ದು ಭವಿಷ್ಯವನ್ನು ಉತ್ತಮ ಪಡಿಸಿಕೊಳ್ಳಬಹುದು ಎಂದರು.

ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎ.ಟಿ. ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕುಂಞಪ್ಪ ಪವಿತ್ರ, ಸದಸ್ಯೆ ಸುಜಾತ ಚಂದ್ರಶೇಖರ್, ಶಾಲಾ ಮುಖ್ಯ ಶಿಕ್ಷಕಿ ಸರೋಜ, ದೈಹಿಕ ಶಿಕ್ಷಕಿ ಪ್ರೇಮಲತಾ ಶೆಡ್ತಿ, ಎಸ್‌ಡಿಎಂಸಿ ಸದಸ್ಯ ಮನೋಜ್, ತಂಗಪ್ಪ, ಪಿ.ಸಿ. ಚಂದ್ರ, ಕಾಳ, ಮೂರ್ನಾಡು ಸಿಆರ್‌ಪಿ ಪದ್ಮನಾಭ ಇನ್ನಿತರರು ಇದ್ದರು. ಮಾರಂಭಕ್ಕೂ ಮುನ್ನ ಜಿಲ್ಲಾ ಪಂಚಾ ಯಿತಿ ಸದಸ್ಯೆ ಕಲಾವತಿ ಪೂವಪ್ಪ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ವಿವಿಧ ಶಾಲೆಯ ಕ್ರೀಡಾಪಟುಗಳು ಪಥಸಂಚಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.