ADVERTISEMENT

ಚಿನ್ನೇನಹಳ್ಳಿ; ಕಾಡಾನೆ ದಾಳಿಗೆ ಬೆಳೆ ನಷ್ಟ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2017, 6:23 IST
Last Updated 6 ಸೆಪ್ಟೆಂಬರ್ 2017, 6:23 IST

ಕುಶಾಲನಗರ: ಉತ್ತರ ಕೊಡಗಿನ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ವಲಯದ ಅರಣ್ಯ ಪ್ರದೇಶದ ಅಂಚಿನ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಕಾಡಾನೆಗಳ ಹಿಂಡು ಸಂಜೆಯಾ ದೊಡನೆ ರೈತರ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ತಿಂದು, ತುಳಿದು ನಾಶ ಪಡಿಸುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಕಾಡಾನೆ ದಾಳಿಯಿಂದ ಅರಣ್ಯದ ಅಂಚಿನಲ್ಲಿ ಚಿನ್ನೇನಹಳ್ಳಿ, ಹಳಗೋಟೆ, ಮರೂರು, ಏಳನೇ ಹೊಸಕೋಟೆ, ಚಿಕ್ಕಅಳವಾರ, ಸಿದ್ಧಲಿಂಗಪುರ ಗ್ರಾಮ ಗಳಲ್ಲಿ ನೂರಾರು ಏಕರೆ ಪ್ರದೇಶದಲ್ಲಿ ಬೆಳೆದಿರುವ ಜೋಳ, ಶುಂಠಿ, ಬಾಳೆ, ತೆಂಗು, ಸುವರ್ಣಗೆಡ್ಡೆ ಮತ್ತಿತರರ ಬೆಳೆಗಳು ಸಂಪೂರ್ಣ ಹಾನಿಗೊಂಡು ಅಪಾರ ನಷ್ಟ ಸಂಭವಿಸಿದೆ.

‘ಚಿನ್ನೇನಹಳ್ಳಿ ಅರಣ್ಯ ದಂಚಿ ನಲ್ಲಿ ಕಳೆದ 5 ವರ್ಷಗಳಿಂದ ತೀವ್ರಗೊಂಡಿ ರುವ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸೌರವಿದ್ಯುತ್ ತಂತಿ ಬೇಲಿ ನಿರ್ಮಾಣ ಮಾಡಲಾಗಿತ್ತು. ಆದರೆ ಅದು ಸೂಕ್ತ ನಿರ್ವಹಣೆಯಿಲ್ಲದೆ ಸಂಪೂರ್ಣ ನೆಲಕಚ್ಚಿದೆ. ಇದರಿಂದ ಕಾಡಾನೆಗಳು ಸುಲಭವಾಗಿ ಗ್ರಾಮಗಳತ್ತ ನುಗ್ಗುತ್ತಿವೆ. ಅರಣ್ಯದಂಚಿನ ರೈತರ ಬದುಕು ಸಂಕಷ್ಟದಿಂದ ಕೂಡಿದೆ’ ಎಂದು ರೈತ ಸೋಮಣ್ಣ ಅಳಲನ್ನು ತೊಡಿಕೊಂಡಿದ್ದಾರೆ.

ADVERTISEMENT

ವಿದ್ಯುತ್ , ಕುಡಿಯುವ ನೀರು ಸೇರಿದಂತೆ ಮೂಲಸೌಲಭ್ಯಗಳಿಂದ ವಂಚಿತಗೊಂಡಿರುವ ಈ ಗ್ರಾಮಗಳಲ್ಲಿ ಈಗ ಆನೆಗಳ ಹಾವಳಿಯೂ ಹೆಚ್ಚಾಗಿರುವುದರಿಂದ ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಬೆಳೆ ನಾಶಪಡಿಸುತ್ತಿರುವ ಬಗ್ಗೆ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಭಾಗದಲ್ಲಿ ತೀವ್ರಗೊಂಡಿರುವ ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಸೌರವಿದ್ಯುತ್ ತಂತಿ ಬೇಲಿಯನ್ನು ಮತ್ತೆ ಅಳವಡಿಸಬೇಕು ಹಾಗೂ ರೈತರಿಗೆ ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಮುಖಂಡ ಜಗದೀಶ್ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.