ADVERTISEMENT

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2017, 7:56 IST
Last Updated 1 ಮಾರ್ಚ್ 2017, 7:56 IST

ಕುಶಾಲನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಭ್ರಷ್ಟಚಾರದಲ್ಲಿ ತೊಡಗಿದ್ದು, ಹೈಕಮಾಂಡ್ ಗೆ ಕಪ್ಪ ನೀಡಿದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಮಂಗಳವಾರ ಬಿಜೆಪಿ ಯುವ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ಕೆ.ಜಿ.ಮನು ಹಾಗೂ ಯುವ ಘಟಕದ ಕಾರ್ಯದರ್ಶಿ ದಿನೇಶ್ ನೇತೃತ್ವದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಜಾಮಾಯಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಕಾರ್ಯಪ್ಪ ವೃತ್ತದಿಂದ ರಥಬೀದಿ ಮೂಲಕ ನಾಡಕಚೇರಿ ವರೆಗೆ ಮೆರವ ಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ಕಂದಾಯ ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಪ.ಪಂ.ಅಧ್ಯಕ್ಷ ಎಂ.ಎಂ.ಚರಣ್. ಕಾಂಗ್ರೆಸ್ ಹೈಕಮಾಂಡ್‌ಗೆ ರಾಜ್ಯ ನಾಯ ಕರು ನೀಡಿರುವ ಕಪ್ಪ ಡೈರಿಯಿಂದ ಬಹಿರಂಗಗೊಂಡಿದೆ. ಭ್ರಷ್ಟ ಆಡಳಿತ ನಡೆಸುತ್ತಿರುವ ಸರ್ಕಾರಕ್ಕೆ ಹೈಕಮಾಂಡ್ ಒತ್ತಾಸೆಯಾಗಿದೆ ಎಂದು ದೂರಿದರು.

ಬಿಜೆಪಿ ಮುಖಂಡ ಜಿ.ಎಲ್. ನಾಗರಾಜು ಮಾತನಾಡಿದರು. ಪ.ಪಂ.ಸದಸ್ಯ ಎಚ್.ಎಂ. ಮಧು ಸೂದನ್, ಬಿಜೆಪಿ ಮುಖಂಡ  ಬೋಸ್ ಮೊಣ್ಣಪ್ಪ, ಎಚ್.ಡಿ. ಶಿವಾಜಿ ರಾವ್, ಶಿವರಾಜ್, ಕೆ.ಎನ್.ದೇವರಾಜ್, ಪಾರ್ವತಿ, ಅಣ್ಣಯ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.