ADVERTISEMENT

ವಾಯುಮಾಲಿನ್ಯ ನಿಯಂತ್ರಿಸಲು ಸಲಹೆ

ವಾಯುಮಾಲಿನ್ಯ ಮಾಪನ ಸಂಚಾರಿ ವಾಹನದ ಉದ್ಘಾಟನೆ, ಜಾಗೃತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 23 ಜನವರಿ 2017, 11:18 IST
Last Updated 23 ಜನವರಿ 2017, 11:18 IST
ವಾಯುಮಾಲಿನ್ಯ ನಿಯಂತ್ರಿಸಲು ಸಲಹೆ
ವಾಯುಮಾಲಿನ್ಯ ನಿಯಂತ್ರಿಸಲು ಸಲಹೆ   

ಮಡಿಕೇರಿ: ‘ವಾಹನಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇದರಿಂದ ವಾಯು ಮಾಲಿನ್ಯ ಸಹ ಅಧಿಕವಾಗುತ್ತಿದ್ದು, ವಾಯುಮಾಲಿನ್ಯ ನಿಯಂತ್ರಣ ಮಾಡಲು ವಾಹನಗಳ ತಪಾಸಣೆ ಕಡ್ಡಾಯವಾಗಿ ಆಗಬೇಕು’ ಎಂದು ಜಿಲ್ಲಾ ಪ್ರಧಾನ ನ್ಯಾಯಾಧೀಶ ಆರ್‌ಕೆಜಿ.ಎಂಎಂ. ಮಹಾಸ್ವಾಮೀಜಿ ಹೇಳಿದರು. 

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರಿಗೆ ಇಲಾಖೆ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ನಗರದ ನ್ಯಾಯಾಲಯದ ಆವರಣದಲ್ಲಿ ಶನಿವಾರ ವಾಹನಗಳ ವಾಯುಮಾಲಿನ್ಯ ಮಾಪನ ಸಂಚಾರಿ ವಾಹನದ ಉದ್ಘಾಟನೆ ಹಾಗೂ ತಪಾಸಣೆ ಮತ್ತು ಜಾಗೃತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  

ಶುದ್ಧ ಗಾಳಿ, ಶುದ್ಧ ನೀರು ಪಡೆ ಯಲು ಮರ ಗಿಡಗಳ ಹಾಗೂ ಪ್ರಾಣಿ ಪಕ್ಷಿಗಳ ಸಂರಕ್ಷಣೆ ಅತ್ಯಗತ್ಯ. ವಾಹನ ಗಳಿಂದ ಬಿಡುಗಡೆಯಾಗುವ ಅನಿಲ ಪರಿಸರಕ್ಕೆ ಹಾನಿಕಾರಕ.  ವಾಹನವನ್ನು ಕಾಲಕಾಲಕ್ಕೆ ತಪಾಸಣೆ ಮಾಡಿಸಿ, ಸುಸ್ಥಿಯಲ್ಲಿಟ್ಟಾಗ ಮಾತ್ರ ವಾಹನದಿಂದ ಪರಿಸರದಲ್ಲಿ ಉಂಟಾ ಗುವ ವಾಯುಮಾಲಿನ್ಯ ನಿಯಂತ್ರಣ ಸಾಧ್ಯ ಎಂದು ಅಭಿಪ್ರಾಯಪಟ್ಟರು.  

ಜಿಲ್ಲಾಧಿಕಾರಿ ರಿಚರ್ಡ್ ವಿನ್ಸೆಂಟ್ ಡಿಸೋಜ ಮಾತನಾಡಿ, ವಾಯು ಮಾಲಿ ನ್ಯದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸ ಬೇಕು. ಆ ನಿಟ್ಟಿನಲ್ಲಿ ಸಾರ್ವಜನಿಕರೂ ಕೈಜೋಡಿಸಬೇಕು ಎಂದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಲಕ್ಷ್ಮಣ್ ಮಾತನಾಡಿ, ಭೂಮಿಯಲ್ಲಿ ಶೇ 42ರಷ್ಟು ವಾಯು ಮಾಲಿನ್ಯ ವಾಹನ ಉಗುಳುವ ಹೊಗೆ ಯಿಂದ ಆಗುತ್ತದೆ. ಆದ್ದರಿಂದ ಈ ಬಗ್ಗೆ ವಿಶೇಷ ಗಮನಹರಿಸಬೇಕು ಎಂದರು.

ಘನ ತ್ಯಾಜ್ಯಗಳ ವಿಲೇವಾರಿ, ಆಸ್ಪತ್ರೆಗಳ ತ್ಯಾಜ್ಯ ವಿಲೇವಾರಿ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ನದಿ ಪಾತ್ರ ದಲ್ಲಿ ಕಲುಷಿತ ನೀರು ಸೇರಿದಂತೆ ಎಚ್ಚ ರಿಕೆ ವಹಿಸಬೇಕು ಎಂದು ತಿಳಿಸಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಜೆ.ಜಿ. ಕಾವೇರಪ್ಪ, ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್‌, ಮೈಸೂರಿನ ಹಿರಿಯ ಪರಿಸರ ಅಧಿಕಾರಿ ಕೆ.ಎಂ. ಲಿಂಗರಾಜು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ರಮಾನಾಥ್ ಇದ್ದರು.ಜಿಲ್ಲಾ ಪರಿಸರ ಅಧಿಕಾರಿ ಜಿ.ಆರ್. ಗಣೇಶನ್ ಸ್ವಾಗತಿಸಿದರು. ಕಾನೂನು ಸೇವಾ ಪ್ರಾಧಿಕಾರದ ಜಯಪ್ಪ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.