ADVERTISEMENT

ವಿಜ್ಞಾನ ಕಲಿಕೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2017, 7:55 IST
Last Updated 1 ಮಾರ್ಚ್ 2017, 7:55 IST

ಸುಂಟಿಕೊಪ್ಪ: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಭಾರತೀಯ ವಿಜ್ಞಾನಿಗಳ ಕೊಡುಗೆ ಅಪಾರವಾದುದು. ವಿದ್ಯಾರ್ಥಿ ಗಳು ವಿಜ್ಞಾನಿಗಳ ಸಂಶೋಧನೆ ಮತ್ತು ಸಾಧನೆ ಬಗ್ಗೆ ಅಧ್ಯಯನ ಮಾಡುವ ಮೂಲಕ ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಬೇಕು ಎಂದು ಇಲ್ಲಿನ ಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕ ನಾಗಭೂಷಣ್ ಹೇಳಿದರು.

ಸುಂಟಿಕೊಪ್ಪ  ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಸಂಘ ಮತ್ತು ಇಕೋ ಕ್ಲಬ್ ವತಿಯಿಂದ ಕರ್ನಾಟಕ ಬ್ಯಾಂಕಿನ ಸುಂಟಿಕೊಪ್ಪ ಶಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಜಿಲ್ಲಾ ಸಮಿತಿ ಆಶ್ರಯದಲ್ಲಿ ಮಂಗಳ ವಾರ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ದೇಶದ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನೆಯ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಮೂಲ ವಿಜ್ಞಾನ ಕಲಿಕೆಯಲ್ಲಿ ಕುತೂಹಲ ಮತ್ತು ಆಸಕ್ತಿ ಬೆಳೆಸಿಕೊಂಡು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ನೊಬೆಲ್ ಪುರಸ್ಕೃತ ವಿಜ್ಞಾನಿ ಸರ್ ಸಿ.ವಿ.ರಾಮನ್ ಅವರ ‘ರಾಮನ್ ಪರಿ ಣಾಮದ ಬೆಳಕಿನ ಚದುರುವಿಕೆ’ ಬಗ್ಗೆ  ಕುಶಾಲನಗರ ಸರ್ಕಾರಿ ಎಂಜಿನಿಯ ರಿಂಗ್ ಕಾಲೇಜಿನ ಉಪನ್ಯಾಸಕ ಜಿ.ಶ್ರೀನಾಥ್‌ ವಿವರಣೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಜ್ಞಾನ ಸಂಘದ ಸಂಚಾಲಕಿ ಶಿಕ್ಷಕಿ ಎಂ.ಎನ್.ಲತಾ, ವಿದ್ಯಾರ್ಥಿಗಳು ವೈಜ್ಞಾ ನಿಕ ಮನೋಭಾವನೆ ಬೆಳೆಸಿಕೊಳ್ಳುವ ಮೂಲಕ ಮೂಲ ವಿಜ್ಞಾನ ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.

ಕಾರ್ಯಕ್ರಮದ ಸಂಯೋಜಕ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ ದರು. ಸಿ ಆರ್ ಪಿ ಪುರುಷೋತ್ತಮ್, ಶಿಕ್ಷಕಿಯರಾದ ಟಿ.ಪವಿತ್ರಾ, ಮಂಜುಳಾ ಕೆ.ಕೆರೂರ್ ಇದ್ದರು.

ವಿದ್ಯಾರ್ಥಿಗಳಾದ  ಸಿ.ವಿ. ಆದಿತ್ಯ ಸ್ವಾಗತಿಸಿದರು. ಶ್ಯಾಮಿಲಾ ನಿರ್ವಹಿಸಿರು. ರಶೀದ್ ವಂದಿಸಿದರು.  ಸುಜಿನಿ ಮತ್ತು ತಂಡದವರು ವಿಜ್ಞಾನ ಗೀತೆ ಹಾಡಿದರು.

ವಿಜ್ಞಾನ ದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯದ ಕುರಿತು ಏರ್ಪಡಿಸಿದ್ದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ವಿಜ್ಞಾನಿಗಳ ಪುಸ್ತಕಗಳನ್ನು ಬಹುಮಾನ ರೂಪದಲ್ಲಿ ನೀಡಿ ಗೌರವಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.