ADVERTISEMENT

ಸಿದ್ದರಾಮಯ್ಯ ಭಾವಚಿತ್ರ ವಿರೂಪ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2017, 6:24 IST
Last Updated 29 ನವೆಂಬರ್ 2017, 6:24 IST

ವಿರಾಜಪೇಟೆ: ಇಲ್ಲಿನ ತಾಲ್ಲೂಕು ಕಚೇರಿಯ ಬಳಿ ಅಳವಡಿಸಲಾಗಿದ್ದ ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಪ್ರಚಾರ ಮಾಡುವ ಫ್ಲೆಕ್ಸ್‌ನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರ ವಿರೂಪಗೊಳಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಕೆ.ಅಬ್ದುಲ್ ಸಲಾಂ ಮಾತನಾಡಿ, ‘ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಕೆಲವು ಕಿಡಿಗೇಡಿಗಳು ಇಂತಹ ಹೀನ ಕೃತ್ಯಕ್ಕೆ ಕೈ ಹಾಕಿದ್ದಾರೆ. ಪೊಲೀಸರು ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಜಿ.ಜಿ.ಮೋಹನ್, ಬ್ಲಾಕ್ ಉಪಾಧ್ಯಕ್ಷ ಹನೀಫ್, ಮಾಳೆಟಿರ ಬೋಪಣ್ಣ, ಚಾರಿಮಂಡ ಶರಣು, ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಹನೀಫ್ ಸಂಪಾಜೆ, ಶಶಿಧರನ್ ಇದ್ದರು.

ADVERTISEMENT

ಪ್ರತಿಭಟನೆಯ ನಂತರ ಕಾಂಗ್ರೆಸ್‌ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದರು. ಪ್ರತಿಭಟನೆ ಬಳಿಕ ಎಚ್ಚೆತ್ತ ಅಧಿಕಾರಿಗಳು ಫ್ಲೆಕ್ಸ್‌ನ್ನು ಶುಚಿಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.