ADVERTISEMENT

1ರಿಂದ ಜನಜಾಗೃತಿ ಕಾರ್ಯಕ್ರಮ

ಕೊಡಗು ಜಿಲ್ಲೆಯಲ್ಲಿ ಕಲುಷಿತಗೊಳ್ಳುತ್ತಿರುವ ಕಾವೇರಿ ನದಿ; ರಕ್ಷಣೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2017, 9:01 IST
Last Updated 20 ಮಾರ್ಚ್ 2017, 9:01 IST

ಮಡಿಕೇರಿ: ಜಿಲ್ಲೆಯಲ್ಲಿ ನದಿ ನೀರು ಕಲುಷಿತಗೊಳ್ಳುತ್ತಿರುವುದನ್ನು ತಡೆ ಯುವ ನಿಟ್ಟಿನಲ್ಲಿ ಜಿಲ್ಲಾ ಪಂಚಾ ಯಿತಿಯು ಏಪ್ರಿಲ್1 ರಿಂದ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಚಾರುಲತಾ ಸೋಮಲ್ ಮಾಹಿತಿ ನೀಡಿದರು.

ನಗರದ ಪತ್ರಿಕಾಭವನದಲ್ಲಿ ಶನಿವಾರ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಜಿಲ್ಲೆಯಲ್ಲಿ ಕಾವೇರಿ ನದಿಗೆ ಕಲುಷಿತ ನೀರು ಸೇರುತ್ತಿದೆ. ಆ ನಿಟ್ಟಿನಲ್ಲಿ ಏಪ್ರಿಲ್ 1 ರಿಂದ ಜನಜಾಗೃತಿ ಕಾರ್ಯ ಕ್ರಮವನ್ನು  ಜಿಲ್ಲೆಯಾದ್ಯಂತ ಹಮ್ಮಿಕೊಳ್ಳ ಲಾಗುವುದು’ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶವನ್ನು ಬಯಲು ಮಲ ವಿಸರ್ಜನೆ ಮುಕ್ತ ಮಾಡುವ ನಿಟ್ಟಿನಲ್ಲಿ, ಶೌಚಾಲಯಕ್ಕೆ  ಪ್ರೋತ್ಸಾಹ ಧನ ಒದಗಿಸಲಾಗುತ್ತಿದೆ. ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಒಟ್ಟು 2,310  ಶೌಚಾಲಯ ನಿರ್ಮಿಸುವ ಗುರಿ ಇದ್ದರೂ 2,910 ಶೌಚಾಲಯ ಗಳನ್ನು ನಿರ್ಮಿ ಸುವ ಮೂಲಕ ಹೆಚ್ಚಿನ ಪ್ರಗತಿ ಸಾಧಿಸಿದ್ದು, ಜಿಲ್ಲೆ ಪ್ರಥಮ ಶ್ರೇಣಿಯಲ್ಲಿದೆ ಎಂದು ಮಾಹಿತಿ ನೀಡಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜ ನೆಯಡಿ ಜಿಲ್ಲೆಗೆ ₹25.16 ಕೋಟಿ ಅನುದಾನ ಬಿಡುಗಡೆಯಾ ಗಿದೆ. ಸುವರ್ಣ ಗ್ರಾಮೋದಯ ಯೋಜನೆ ಯಡಿ 5ನೇ ಹಂತದಲ್ಲಿ 25 ಗ್ರಾಮಗ ಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದು, ಇಲ್ಲಿಯವರೆಗೆ ₹13 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.  

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ವಾಡಿಕೆ ಮಳೆ ಕಡಿಮೆಯಾಗಿರುವುದರಿಂದ ನೀರು ಸಂರಕ್ಷಣಾ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡುವಂತೆಯೂ, ಸ್ಥಳಾವಕಾಶ ಲಭ್ಯವಿರುವ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ, ಸಸಿ ಬೆಳೆಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಹಾಗೂ  ತೋಟಗಾರಿಕಾ ಇಲಾಖಾ ಅಧಿಕಾರಿಗಳ ತಾಂತ್ರಿಕ ಸಹಕಾರ ದೊಂದಿಗೆ ತೋಟಗಾರಿಕಾ ಬೆಳೆಗಳನ್ನು ಬೆಳೆಸುವಲ್ಲಿ ಕ್ರಮ ಕೈಗೊಳ್ಳಲಾಗಿದೆ  ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಹುದ್ದೆಗಳು ಸಾಕಷ್ಟಿದ್ದು, ಇದೇ ಕಾರಣಕ್ಕೆ ಹಲವು ಯೋಜನೆಗಳ ಅನುಷ್ಠಾನದಲ್ಲೂ ಹಿನ್ನಡೆಯಾಗುತ್ತಿದೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಮನವಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಆಶ್ರಮ ಶಾಲೆಗಳಲ್ಲಿ ನಲಿ–ಕಲಿ ಶಿಕ್ಷಣಕ್ಕೆ ಉತ್ತೇಜನ: ಆಶ್ರಮ ಶಾಲೆಗಳ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಸರಿ ಯಾದ ಶಿಕ್ಷಣ, ಮಾರ್ಗದರ್ಶನ ನೀಡು ವುದು. ಜತೆಗೆ ಸರ್ಕಾರಿ ಶಾಲೆಗಳ ಮಾದರಿಯಲ್ಲೇ,  ನಲಿ–ಕಲಿ ಶಿಕ್ಷಣ ಹಮ್ಮಿಕೊಳ್ಳಲಾಗುವುದು. ಆ ನಿಟ್ಟಿನಲ್ಲಿ ಶಿಕ್ಷಕರಿಗೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ:  ಜಿಲ್ಲೆಯಲ್ಲಿ 17 ಗ್ರಾಮ ಪಂಚಾಯಿತಿಗ ಳಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳು ಕಾರ್ಯನಿರ್ವಹಿಸುತ್ತಿವೆ.  ಅವಶ್ಯ ಇರುವ ಗ್ರಾಮ ಪಂಚಾಯಿತಿಗಳಲ್ಲಿ ತ್ಯಾಜ್ಯ ವಿಲೇ ವಾರಿ ಘಟಕ್ಕ ಸ್ಥಾಪನೆಗೆ ಪ್ರಸ್ತಾವ ಸಲ್ಲಿಸಲಾಗಿದೆ.  ಪ್ಲಾಸ್ಟಿಕ್ ಮುಕ್ತಗ್ರಾಮ ಗಳನ್ನು ಮಾಡಲು ಕ್ರಮಕೈಗೊಳ್ಳುವಂತೆ ಪಿಡಿಒ ಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ವಸತಿ ಸೌಲಭ್ಯ: 2013 ರಿಂದ 2016 ರ  ಸಾಲಿನ ವರೆಗೆ ಇಂದಿರಾ ಆವಾಸ್ ಯೋಜನೆಯಡಿ 2,046 ಮನೆಗಳನ್ನು ಪೂರ್ಣಗೊಳಿಸಲಾಗಿದೆ. 550 ಮನೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಬಸವ ವಸತಿ ಯೋಜನೆಯಡಿ  2,210 ಮನೆ ಪೂರ್ಣಗೊಂಡಿದ್ದು, 800 ಕ್ಕೂ ಹೆಚ್ಚು ಮನೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

ಅಂಬೇಡ್ಕರ್ ವಸತಿ ಯೋಜನೆಯಡಿ ಹಲವು ಮನೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂ ಡಿದೆ. ನಿವೇಶನ ಇಲ್ಲದಿರುವುದ ರಿಂದ ಕೆಲವು ವಸತಿ ಯೋಜನೆಗಳು ಕುಂಠಿತ ಗೊಂಡಿವೆ ಎಂದು ಮಾಹಿತಿ ನೀಡಿದರು.  

ಈಗಾಗಲೇ  ಬಾಕಿ ಇರುವ ಮನೆಗಳ ನಿರ್ಮಾಣ ಕಾಮಗಾರಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ತಾಲ್ಲೂಕಿನ ಇ.ಒ ಗಳಿಗೆ ಸೂಚನೆ ನೀಡ ಲಾಗಿದೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.