ADVERTISEMENT

11ರಂದು ದ್ವೈಮಾಸಿಕ ಲೋಕಅದಲತ್

ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಆರ್.ಕೆ.ಜಿ.ಎಂ. ಮಹಾಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2017, 10:01 IST
Last Updated 28 ಫೆಬ್ರುವರಿ 2017, 10:01 IST

ಮಡಿಕೇರಿ:  ಕೊಡಗು -ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ್ 11ರಂದು ದ್ವೈಮಾಸಿಕ ಲೋಕಅದಲತ್ ನಡೆಯಲಿದೆ.

ವಿವಿಧ ಪ್ರಕರಣ ಸಂಬಂಧ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಬಯಸುವವರು ಲೋಕಅದಲತ್‌ನಲ್ಲಿ ಪಾಲ್ಗೊಳ್ಳಬಹುದು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಆರ್.ಕೆ.ಜಿ.ಎಂ. ಮಹಾಸ್ವಾಮೀಜಿ ಮನವಿ ಮಾಡಿದರು.

ನಗರದ ಪ್ರಧಾನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕಾನೂನು ಸೇವಾ ಪ್ರಾಧಿಕಾರದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.   

ADVERTISEMENT

ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳನ್ನು ಜನತಾ ನ್ಯಾಯಾಲಯದ ಮೂಲಕ ಇತ್ಯರ್ಥ ಪಡಿಸಲು ಉದ್ದೇಶಿಸಲಾಗಿದೆ ಎಂದು  ತಿಳಿಸಿದರು.  

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್‌ ಪ್ರಭು ಮಾತನಾಡಿ, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ಪೌರಾಡಳಿತ, ಪಂಚಾಯತ್, ವಿದ್ಯುತ್ ಮಂಡಳಿ ಮತ್ತಿತರ ಸ್ಥಳೀಯ ಸಂಸ್ಥೆಗಳ ವಿರುದ್ಧ ದಾಖಲಾದ ಪ್ರಕರಣಗಳು, ಗ್ರಾಹಕರ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳು, ರಾಜೀ ಆಗಬಹುದಾದ ಎಲ್ಲಾ ಪ್ರಕರಣಗಳನ್ನು ಜನತಾ ನ್ಯಾಯಾಲಯದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ತಿಳಿಸಿದರು.

ಕಾನೂನು ಸಾಕ್ಷರತಾ ರಥ:  ಏಪ್ರಿಲ್ 1ರಿಂದ 12ರವರೆಗೆ ಕಾನೂನು ಸಾಕ್ಷರತಾ ರಥವು ಜಿಲ್ಲೆಯಲ್ಲಿ ಸಂಚರಿಸಿ ಕಾನೂನಿನ ಬಗ್ಗೆ ಅರಿವು ಮೂಡಿಸಲಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೋಹನ್ ಪ್ರಭು ತಿಳಿಸಿದರು.

1ರಿಂದ 4ರವರೆಗೆ ಮಡಿಕೇರಿ ತಾಲ್ಲೂಕು, 5ರಿಂದ 8ರವರೆಗೆ ವಿರಾಜಪೇಟೆ ತಾಲ್ಲೂಕು ಮತ್ತು 9ರಿಂದ 12ರವರೆಗೆ ಸೋಮವಾರಪೇಟೆ ತಾಲ್ಲೂಕಿನಲ್ಲಿ ಕಾನೂನು ಸಾಕ್ಷರತಾ ರಥ ಒಟ್ಟು 12 ದಿನಗಳ ಕಾಲ ಸಂಚರಿಸಲಿದೆ ಎಂದು ಮಾಹಿತಿ ನೀಡಿದರು. 

1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಡಿ.ಪವನೇಶ್, ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಸಿ. ಶ್ರೀಕಾಂತ್, ವಕೀಲರಾದ ರಮೇಶ್ ಬಾಬು, ಸರ್ಕಾರಿ ವಕೀಲರಾದ ಶ್ರೀಧರ್ ನಾಯರ್, ಜಿ.ಪಂ. ಉಪ ಕಾರ್ಯದರ್ಶಿ ವಿಶ್ವನಾಥ ಪೂಜಾರಿ, ಕಾರಾಗೃಹ ಅಧೀಕ್ಷಕರಾದ ಜಯರಾಮ್, ಎಂಜಿನಿಯರ್ ಬಸವರಾಜು, ಜಿಲ್ಲಾ ಆಸ್ಪತ್ರೆಯ ವೈದ್ಯರಾದ ಡಾ.ಮಂಜುನಾಥ್ ಪ್ರಸಾದ್,  ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರಾದ ಪ್ರಮೋದ್, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಬಿ.ಎಸ್. ಜಯಪ್ಪ     ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.