ADVERTISEMENT

5ರಂದು ಕನ್ನಡ ಸಾಹಿತ್ಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 28 ಮೇ 2017, 6:29 IST
Last Updated 28 ಮೇ 2017, 6:29 IST

ಸೋಮವಾರಪೇಟೆ: ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಜೂ. 5ರಂದು ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವರೂ ಕೈ ಜೋಡಿಸಬೇಕೆಂದು ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ   ಶಾಸಕ ಅಪ್ಪಚ್ಚು ರಂಜನ್ ಮನವಿ ಮಾಡಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು, ಅಂದು ಬೆಳಿಗ್ಗೆ 8 ಗಂಟೆಗೆ ತಹಶೀಲ್ದಾರ್ ಕೃಷ್ಣ  ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. 9.30ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ ಎಂದರು. ನಗರದಲ್ಲಿ ದಿ. ಎಚ್.ಡಿ.ಗುರುಲಿಂಗಪ್ಪ ನೆನಪಿನ ದ್ವಾರ, ದಿ.ಸುಮನ್ ಶೇಖರ್, ಎಂ.ಆರ್.ಅಶೋಕ್, ಸ್ವಾತಂತ್ರ್ಯ ಹೋರಾಟಗಾರ ಮಲ್ಲೇಗೌಡ, ಡಿ.ಸಿ. ಜಯರಾಂ ಹೆಸರಿನಲ್ಲಿ ವಿವಿಧ ದ್ವಾರ ನಿರ್ಮಿಸಲಾಗಿದೆ.

ಸಮ್ಮೇಳನದ ಸಭಾಂಗಣದ ಬಳಿ ಪತ್ರಕರ್ತ ದಿ. ಸಿ.ಎನ್. ಸುನೀಲ್‌ ಕುಮಾರ್ ಹೆಸರಿನಲ್ಲಿ ಪುಸ್ತಕ ಮಳಿಗೆ ತೆರೆಯಲಾಗುವುದು ಎಂದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಜವರಪ್ಪ, ಅಂದು ಬೆಳಿಗ್ಗೆ 11.30ಕ್ಕೆ ಸಮ್ಮೇಳನ ಉದ್ಘಾಟನೆ ನಡೆಯಲಿದೆ. ವಿಶ್ವೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ADVERTISEMENT

ಜಿಲ್ಲಾಧ್ಯಕ್ಷ ಲೋಕೇಶ್‌ ಸಾಗರ್, ನಿಕಟಪೂರ್ವ ಅಧ್ಯಕ್ಷ ಬಾಚರಣಿಯಂಡ ಅಪ್ಪಣ್ಣ, ಹಿರಿಯ ಸಾಹಿತಿ ಮಳಲಿ ವಸಂತ್‌ಕುಮಾರ್, ಉಸ್ತುವಾರಿ ಸಚಿವ ಸೀತಾರಾಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ.ಹರೀಶ್, ಸಂಸದ ಪ್ರತಾಪ್ ಸಿಂಹ, ರಾಜ್ಯ ರೇಷ್ಮೆ ಮಂಡಳಿ ಅಧ್ಯಕ್ಷ ಟಿ.ಪಿ.ರಮೇಶ್, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪದ್ಮಿನಿ ಪೊನ್ನಪ್ಪ  ಭಾಗವಹಿಸಲಿದ್ದಾರೆ ಎಂದರು.ಮಧ್ಯಾಹ್ನ 2.15ಕ್ಕೆ ವಿವಿಧ ವಿಚಾರಗೋಷ್ಠಿ, 3.15ಕ್ಕೆ ಕವಿಗೋಷ್ಠಿ, ಸಂಜೆ 4 ಗಂಟೆಗೆ ಬಹಿರಂಗ ಅಧಿವೇಶನ ನಡೆಯಲಿದೆ. 4.30ಕ್ಕೆ ಸನ್ಮಾನ ನಡೆಯಲಿದೆ.

ಸಾಧಕರಿಗೆ ಸನ್ಮಾನ:  ಸಂಧ್ಯಾ ರಾಂಪ್ರಸಾದ್ (ಸಂಗೀತ), ಎಸ್.ಪಿ. ಮಾಚಯ್ಯ ನಾಪಂಡ ಚಿಣ್ಣಪ್ಪ (ಜನಪದ), ಗೌರಿ (ಕಲೆ ಮತ್ತು ಸಂಸ್ಕೃತಿ), ಹೊಯ್ಸಳ (ಕೃಷಿ), ನರೇಶ್ಚಂದ್ರ (ಪತ್ರಿಕೋದ್ಯಮ), ಕಾಳಮ್ಮ (ಪೌರಕಾರ್ಮಿಕ), ಬಿ.ಬಿ. ವೀರಭದ್ರಪ್ಪ, ಜಲಜಾ ಶೇಖರ್ (ಶಿಕ್ಷಣ), ಅಬೂಬಕರ್ ಸಿದ್ದೀಕ್ ಮೋಂಟುಗೋಳಿ (ಸಾಹಿತ್ಯ), ಅರ್ಜುನ್ ಹಾಲಪ್ಪ (ಕ್ರೀಡೆ), ಶರ್ಮಿಳಾ ಫರ್ನಾಂಡೀಸ್ (ವೈದ್ಯಕೀಯ), ಬಿ.ಎಂ.ಮಲ್ಲಯ್ಯ, ಜಯಪ್ಪ ಹಾನಗಲ್ಲು, ಗಂಗಾಧರ್ ಮಾಲಂಬಿ (ಸಮಾಜ ಸೇವೆ), ದರ್ಶನ್ ಸಾಗರ್ (ಯುವಪ್ರತಿಭೆ) ಅವರನ್ನು ಸನ್ಮಾನಿಸಲಾಗುವುದು.

ಸಂಜೆ 5.30ಕ್ಕೆ ಸಮಾರೋಪ ನಡೆಯಲಿದ್ದು, ಬೆಂಗಳೂರು ದೂರದರ್ಶನದ ದಕ್ಷಿಣ ವಲಯ ಮಹಾ ನಿರ್ದೇಶಕ ಡಾ. ಮಹೇಶ್ ಜೋಶಿ, ಶಾಸಕ ರಂಜನ್, ಎಂಎಲ್ಸಿ ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ, ಕಸಾಪ ಸ್ಥಾಪಕ ಅಧ್ಯಕ್ಷ ಪರಮೇಶ್ ಭಾಗವಹಿಸುವರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಮೆರವಣಿಗೆ ಸಮಿತಿ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಹಣಕಾಸು ಸಮಿತಿ ಸಂಚಾಲಕ ಎ.ಎಸ್. ಮಲ್ಲೇಶ್, ಸ್ಮರಣ ಸಂಚಿಕೆ ಸಮಿತಿ ಅಧ್ಯಕ್ಷ ಜೆ.ಸಿ. ಶೇಖರ್, ಕಸಾಪ ಗೌರವ ಕಾರ್ಯದರ್ಶಿ ವಿಜೇತ್‌. ರಾಣಿ ರವೀಂದ್ರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.