ADVERTISEMENT

ತಲಕಾವೇರಿಯಲ್ಲಿ ಪೂಜೆ, ರುದ್ರಾಭಿಷೇಕ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2018, 8:53 IST
Last Updated 6 ಫೆಬ್ರುವರಿ 2018, 8:53 IST

ಮಡಿಕೇರಿ: ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಕೊಡವ ನ್ಯಾಷನಲ್‌ ಕೌನ್ಸಿಲ್‌ ವತಿಯಿಂದ ಪೂಜೆ ನಡೆಯಿತು. ಇದೇ ವೇಳೆ ಸಮಿತಿ ಸದಸ್ಯರು ಅಗಸ್ತ್ಯೇಶ್ವರನಿಗೂ ರುದ್ರಾಭಿಷೇಕ ನೆರವೇರಿಸಲಾಯಿತು.

‘ಅಷ್ಟಮಂಗಲ ಪ್ರಶ್ನೆಯಲ್ಲಿ ಕೊಡವರು ತಮ್ಮ ಕುಲಗುರು ಅಗಸ್ತ್ಯನನ್ನು ದಿವ್ಯ ನಿರ್ಲಕ್ಷ್ಯ ಮಾಡಿದ್ದಾರೆ. ಅಗಸ್ತ್ಯರಿಗೆ ಮತ್ತೆ ಭಕ್ತಿಯಿಂದ ಪೂಜೆ ಸಲ್ಲಿಸಬೇಕು ಎಂದು ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಪೂಜೆ ಸಲ್ಲಿಸಲಾಯಿತು’ ಎಂದು ಸಿಎನ್‌ಸಿ ಅಧ್ಯಕ್ಷ ನಾಚಪ್ಪ ತಿಳಿಸಿದರು.

‘ಜೀವನದಿ ಕಾವೇರಿಗೆ ಜೀವಂತ ವ್ಯಕ್ತಿಯ ಶಾಸನಬದ್ಧ ಸ್ಥಾನಮಾನ ಕಲ್ಪಿಸಲು ಆಗ್ರಹಿಸಿ ಸದ್ಯದಲ್ಲೇ ಜಾಥಾ ಹಮ್ಮಿಕೊಳ್ಳಲಾಗುವುದು. ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಾದ ಕೊಡಗು, ಮೈಸೂರು, ಮಂಡ್ಯ, ಕೃಷ್ಣಗಿರಿ, ಧರ್ಮಪುರಿ, ಈರೋಡ್, ತಿರುಚರಾಪಳ್ಳಿ, ತಂಜಾವುರ್, ಶ್ರೀರಂಗಂ ಮೂಲಕ ಹಾದು ಅಂತಿಮವಾಗಿ ಕಾವೇರಿ ಮತ್ತು ಬಂಗಾಳಕೊಲ್ಲಿ ಸಂಗಮಿಸುವ ಪೂಂಪುಹಾರ್ ಮುಕ್ತಾಯಗೊಳ್ಳಲಿದೆ’ ಎಂದು ಮಾಹಿತಿ ನೀಡಿದರು.

ADVERTISEMENT

‘ಏಳು ಪವಿತ್ರ ಜೀವನದಿಗಳಲ್ಲಿ ಕಾವೇರಿಯೂ ಒಂದು. ನಮ್ಮ ಜಾಥಾದಿಂದ ನದಿಯ ಬಗ್ಗೆ ಧರ್ಮ ಪ್ರಜ್ಞೆ ಜಾಗೃತಿ ಆಗಲಿದೆ’ ಎಂದು ನಾಚಪ್ಪ ನುಡಿದರು. ಕಲಿಯಂಡ ಪ್ರಕಾಶ್, ಪುಲ್ಲೆರ ಕಾಳಪ್ಪ, ಕಾಟುಮಣಿಯಂಡ ಉಮೇಶ್, ಅರೆಯಡ ಗಿರೀಶ್, ಬೊಪ್ಪಂಡ ಬೊಳ್ಳಮ್ಮ, ಮಂದಪಂಡ ಮನೋಜ್, ಬೇಪಡಿಯಂಡ ಬಿದ್ದಪ್ಪ, ನಂದಿನೆರವಂಡ ವಿಜು, ಅಪ್ಪಚ್ಚಿರ ರಮ್ಮಿ ನಾಣಯ್ಯ, ಪಟ್ಟಮಾಡ ಕುಶ, ಅಳಮಂಡ ಜೈ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.