ADVERTISEMENT

ಅರಸು ವೈದ್ಯಕೀಯ ಕಾಲೇಜು ಘಟಿಕೋತ್ಸವ ಮಾ.24ಕ್ಕೆ

ಐದು ವಿದ್ಯಾರ್ಥಿಗಳಿಗೆ ಚಿನ್ನದ ಪದಕ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2017, 4:48 IST
Last Updated 23 ಮಾರ್ಚ್ 2017, 4:48 IST

ಕೋಲಾರ: ‘ದೇವರಾಜು ಅರಸು ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಯ 7ನೇ ಘಟಿಕೋತ್ಸವ ಕಾರ್ಯಕ್ರಮವನ್ನು ಮಾ.24ರಂದು ಬೆಳಿಗ್ಗೆ 11ಕ್ಕೆ ವೈದ್ಯಕೀಯ ಕಾಲೇಜಿನ ರಹಜ ಮಹೋತ್ಸವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ದೇವರಾಜ ಅರಸು ವೈದೈಕೀಯ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಸಿ.ವಿ.ರಘುವೀರ್ ತಿಳಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಘಟಿಕೋತ್ಸವದಲ್ಲಿ ಸಂಸ್ಥೆಯ 271 ಮಂದಿ ವೈದ್ಯಕೀಯ ಪದವೀಧರರಿಗೆ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದರು.

ಸ್ವಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಕೋರ್ಸ್‌ನ ತಲಾ 5 ವಿದ್ಯಾರ್ಥಿಗಳಿಗೆ ಹಾಗೂ ಎಂಬಿಬಿಎಸ್ ವಿದ್ಯಾರ್ಥಿನಿಗೆ ಚಿನ್ನದ ಪದಕ ನೀಡಲಾಗುತ್ತದೆ. ಡಾ.ಆರ್‌.ಯಶಸ್ವಿನಿ, ಡಾ.ಆರ್‌.ನಿಖಿಲಾ, ಡಾ.ಕೆ.ದಿಲೀಪ್‌ಕುಮಾರ್‌, ಡಾ.ಟಿ.ಸಿ.ಸುಪ್ರಿಯಾ, ಡಾ.ಎಸ್‌.ಚೈತ್ರಾ, ಡಾ.ನವನ್ಯಾ ಚಿನ್ನದ ಪದಕ ಗಳಿಸಿದ್ದಾರೆ ಎಂದು ವಿವರಿಸಿದರು.

ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಘಟಿಕೋತ್ಸವ ಭಾಷಣ ಮಾಡುವರು. ಸಂಸ್ಥೆಯ ಕುಲಪತಿ ಡಾ.ಎಸ್.ಕುಮಾರ್ ಪದವಿ ಪ್ರದಾನ ಮಾಡುವರು. ದೇವರಾಜ ಅರಸು ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಆರ್.ಎಲ್.ಜಾಲಪ್ಪ ಅತಿಥಿಯಾಗಿ ಭಾಗವಹಿಸುವರು ಎಂದು ಮಾಹಿತಿ ನೀಡಿದರು.

ಸಂಸ್ಥೆಯ ರಿಜಿಸ್ಟ್ರಾರ್ ಡಾ.ಎ.ವಿ.ಎಂ.ಕುಟ್ಟಿ, ಪ್ರಾಂಶುಪಾಲ ಡಾ.ಹರೇಂದ್ರಕುಮಾರ್, ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ಡಿ.ವಿ.ಎಲ್‌.ಎನ್.ಪ್ರಸಾದ್ ಗೋಷ್ಠಿಯಲ್ಲಿ ಹಾಜರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.