ADVERTISEMENT

ಈಶ್ವರಪ್ಪ ಪ್ರತಿಕೃತಿ ದಹನ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2017, 11:00 IST
Last Updated 16 ನವೆಂಬರ್ 2017, 11:00 IST

ಶ್ರೀನಿವಾಸಪುರ: ಆರೋಗ್ಯ ಸಚಿವ ಕೆ.ಆರ್‌.ರಮೆಶ್‌ ಕುಮಾರ್‌ ಅವರ ಬಗ್ಗೆ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಲಘುವಾಗಿ ಮಾತನಾಡಿದ್ದಾರೆ ಎಂದು ಆಪಾದಿಸಿ ಶ್ರೀನಿವಾಸಪುರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳವಾರ ಕೆ.ಎಸ್‌.ಈಶ್ವರಪ್ಪ ಅವರ ಪ್ರತಿಕೃತಿ ದಹಿಸಿದರು.

ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ದಿಂಬಾಲ ಅಶೋಕ್‌ ಮಾತನಾಡಿ, ‘ಸಚಿವ ಕೆ.ಆರ್‌.ರಮೇಶ್‌ ಕುಮಾರ್‌ ಬಡವರ ಬಗ್ಗೆ ವಿಶೇಷ ಕಾಳಜಿಯುಳ್ಳ ಒಬ್ಬ ಗೌರವಾನ್ವಿತ ರಾಜಕಾರಣಿಯಾಗಿದ್ದಾರೆ. ರಾಜ್ಯದ ಬಡವರ ಹಿತದೃಷ್ಟಿಯಿಂದ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ ತರಲು ಪ್ರಯತ್ನಿಸುತ್ತಿದ್ದಾರೆ. ಹೀಗಿರುವಾಗ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರು ಕೆ.ಆರ್‌.ರಮೇಶ್‌ ಕುಮಾರ್‌ ಅವರ ಬಗ್ಗೆ ತೀರಾ ಲಘುವಾಗಿ ಮಾತನಾಡಿರುವುದು ಖಂಡನೀಯ ಎಂದು ಹೇಳಿದರು.

ಗೌರವಾನ್ವಿತ ಸಚಿವರ ವಿರುದ್ಧ ಮಾತನಾಡಿರುವ ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ತಾಲ್ಲೂಕು ಕಚೇರಿಗೆ ತೆರಳಿ ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರ ಸಲ್ಲಿಸಿದರು.

ಮುಖಂಡರಾದ ಬಿ.ವೆಂಕಟರೆಡ್ಡಿ, ರೋಣೂರು ಚಂದ್ರಶೇಖರ್‌, ಟಿಎಂವಿ.ಮುಕ್ತಿಯಾರ್‌, ನವೀನ್‌ ಕುಮಾರ್‌, ಮುನಿರಾಜು, ಕೆ.ಕೆ.ಮಂಜು, ತಜಮುಲ್‌, ಸರ್ದಾರ್‌,ಯಮನೂರು ನಾಗರಾಜ್‌ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.