ADVERTISEMENT

ಕಾಮಗಾರಿ ಕಳಪೆಯಾದರೆ ಗುತ್ತಿಗೆದಾರರ ವಿರುದ್ಧ ಕ್ರಮ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2017, 5:01 IST
Last Updated 12 ಏಪ್ರಿಲ್ 2017, 5:01 IST

ನಂಗಲಿ: ‘ಎಲ್ಲ ಕಾಮಗಾರಿಗಳು ಗುಣಮಟ್ಟದಲ್ಲಿ ಇರಬೇಕು. ಆಯಾ ಗ್ರಾಮಸ್ಥರೇ ಕಾಮಗಾರಿ ಉಸ್ತುವಾರಿ ವಹಿಸಿಕೊಳ್ಳಬೇಕು’ ಎಂದು ಶಾಸಕ ಕೊತ್ತೂರು ಡಾ.ಜಿ.ಮಂಜುನಾಥ್ ತಿಳಿಸಿದರು.

ಸಮೀಪದ ಹೆಬ್ಬಣಿ ಗ್ರಾಮ ಪಂಚಾ ಯಿತಿ ವ್ಯಾಪ್ತಿಯ ಎಚ್.ಬೈಪ್ಪನ ಹಳ್ಳಿಯಲ್ಲಿ ಗ್ರಾಮ ವಿಕಾಸ ಯೋಜನೆ ಯಡಿ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

‘ಬೈಪ್ಪನಹಳ್ಳಿ ಮತ್ತು ಮಜರಾ ಕೊತ್ತೂರು ಗ್ರಾಮಗಳಿಗೆ ₹ 60 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲಾಗುತ್ತಿದೆ.  ತಾಲ್ಲೂಕಿನ ಆರು ಗ್ರಾಮ ಪಂಚಾಯಿತಿಗಳಿಗೆ ಗ್ರಾಮ ವಿಕಾಸ ಯೋಜನೆಯಡಿ ₹ 3.50 ಕೋಟಿ ಅನುದಾನ ಬಿಡುಗಡೆಯಾಗಿದೆ.  ಕಾಮ ಗಾರಿಗಳು ಪ್ರಗತಿಯಲ್ಲಿವೆ’ ಎಂದರು.

‘ಸಮುದಾಯ ಭವನ, ಅಂಗನವಾಡಿ ಕೇಂದ್ರ, ದೇವಸ್ಥಾನ ನಿರ್ಮಾಣ, ಮೂಲ ಸೌಕರ್ಯಗಳಿಗೆ ಹಣ ಬಳಸಿಕೊಳ್ಳಬೇಕು. ಹಾಗೂ ಕಾಮಗಾರಿಗಳು ಕಳಪೆಯಾದರೆ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನೀಲಕಂಠೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಎನ್. ಪ್ರಕಾಶ್ ರಾಮಚಂದ್ರ, ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನಿರ್ದೇಶಕ ಆರ್. ರಾಜೇಂದ್ರ ಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಬೈರಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಉಷಾ ಶಂಕರ್ ರೆಡ್ಡಿ, ಟಿ. ಶಂಕರಪ್ಪ, ಎಪಿಎಂಸಿ ಅಧ್ಯಕ್ಷ ರಘುಪತಿ ರೆಡ್ಡಿ, ರವಣಪ್ಪ, ನಾರಾಯಣಪ್ಪ, ದೇವರಾಯ ಸಮುದ್ರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೃಷ್ಣಪ್ಪ, ವೇಣುಗೋಪಾಲ್ ರೆಡ್ಡಿ, ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ, ವೆಂಕಟರೆಡ್ಡಿ, ನಾಗರೆಡ್ಡಿ, ಬಿವಿ ನಾರಾಯಣಪ್ಪ, ಜಗನ್ನಾಥ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.