ADVERTISEMENT

ಕಿವುಡರ ಕಲ್ಯಾಣಕ್ಕೆ ಹಣ ಮೀಸಲಿಡಿ

ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2017, 10:24 IST
Last Updated 8 ಮಾರ್ಚ್ 2017, 10:24 IST
ಕೋಲಾರದಲ್ಲಿ ಜಿಲ್ಲಾ ಕಿವುಡರ ಸಂಘದ ಸದಸ್ಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರ ನಗರದ ಬಸ್ ನಿಲ್ದಾಣದ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿತನಕ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕೋಲಾರದಲ್ಲಿ ಜಿಲ್ಲಾ ಕಿವುಡರ ಸಂಘದ ಸದಸ್ಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಗಳವಾರ ನಗರದ ಬಸ್ ನಿಲ್ದಾಣದ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿತನಕ ಪ್ರತಿಭಟನಾ ಮೆರವಣಿಗೆ ನಡೆಸಿದರು.   

ಕೋಲಾರ: ‘ರಾಜ್ಯ ಹಾಗೂ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕಿವುಡರಿಗಾಗಿ ಹಣ ಮೀಸಲು ಇರಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಿವುಡರ ಸಂಘದ ಸದಸ್ಯರು ಮಂಗಳವಾರ ನಗರದಲ್ಲಿ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಕೆ.ಎಚ್.ಶಂಕರ್ ಮಾತನಾಡಿ, ‘ರಾಜ್ಯದಲ್ಲಿ 5 ಸಾವಿರ ಮಂದಿ ಕಿವುಡರಿದ್ದು, ನಮಗೆ ಎಲ್ಲಾ ನಾಗರಿಕರಂತೆ ಸಮಾಜದಲ್ಲಿ ಬದುಕಲು ಅವಕಾಶ ಕಲ್ಪಿಸಿಕೊಡಬೇಕು’ ಎಂದು ಒತ್ತಾಯಿಸಿದರು.

‘ಕಿವುಡರಿಗೆ ಉದ್ಯೋಗದಲ್ಲಿ 75 ಡೆಸಿಬಲ್ ಕಿವುಡುತನ ಇರುವವರಿಗೆ ಮಾತ್ರ ಮೀಸಲಾತಿ ಸೌಲಭ್ಯ ಒದಗಿಸ ಬೇಕು. ಪತಿ ಅಥವಾ ಪತ್ನಿಯಲ್ಲಿ ಯಾರಾ ದರೂ ಒಬ್ಬರು ಸರ್ಕಾರಿ ಕೆಲಸದಲ್ಲಿದ್ದರೆ ಇಬ್ಬರೂ ಒಂದೇ ಸ್ಥಳದಲ್ಲಿ ಜೀವನ ನಡೆಸಲು ವರ್ಗಾವಣೆ ವ್ಯವಸ್ಥೆ ಮಾಡ ಬೇಕು’ ಎಂದು ಮನವಿ ಮಾಡಿದರು.
‘ಪ್ರತಿ ಜಿಲ್ಲೆಯಲ್ಲೂ ಕಿವುಡರಿಗಾಗಿ ಒಂದು ಕಚೇರಿ ತೆರೆಯಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನಗರದ ಹೊಸ ಬಸ್‌ ನಿಲ್ದಾಣದ ವೃತ್ತದಿಂದ ಮೆರವಣಿಗೆ ಆರಂಭಿಸಿದ ಜಿಲ್ಲಾ ಕಿವುಡರ ಸಂಘದ ಪದಾಧಿ ಕಾರಿಗಳು ಹಾಗೂ ಸದಸ್ಯರು ಜಿಲ್ಲಾಧಿ ಕಾರಿ ಕಚೇರಿ ಮುಂದೆ ಕೆಲಕಾಲ ಧರಣಿ ನಡೆಸಿ ನಂತರ  ಮನವಿ ಸಲ್ಲಿಸಿದರು.

ಕರ್ನಾಟಕ ಕಿವುಡರ ಕಲ್ಯಾಣ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ದೇವರಾಜ, ಪದಾಧಿಕಾರಿ ಗಳಾದ ಕೆ.ಎಸ್.ಉಮಾಶಂಕರ್, ಸಂ ತೋಷ್, ರಾಹುಲ್, ವೆಂಕಟೇಶ್‌ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂ ಡಿದ್ದರು.

*
ಅಂಗವಿಕಲ ದಂಪತಿ ವಿವಾಹಕ್ಕೆ ಪ್ರೋತ್ಸಾಹಧನ ನೀಡುವಂತೆ ಕಿವುಡರಿಗೂ ನೀಡಬೇಕು, ಸ್ವಂತ ಉದ್ಯೋಗ ಪ್ರಾರಂಭಿಸಲು ರಿಯಾಯಿತಿ ದರದಲ್ಲಿ ಹಣಕಾಸಿನ ನೆರವು, ಸಾಲ ನೀಡಬೇಕು.
-ಶಂಕರ್, ಕಿವುಡರ ಸಂಘದ ಗೌರವಾಧ್ಯಕ್ಷ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT