ADVERTISEMENT

ನಾಟಿ ಔಷಧ ಸೇವಿಸಿದ್ದ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 21 ಮೇ 2017, 16:20 IST
Last Updated 21 ಮೇ 2017, 16:20 IST

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಗವಾರ ಗ್ರಾಮದಲ್ಲಿ ಮದ್ಯ ವ್ಯಸನ ಬಿಡಲು ನಾಟಿ ಔಷಧ ಸೇವಿಸಿದ್ದ ಇಬ್ಬರು ಭಾನುವಾರ ಮೃತಪಟ್ಟಿದ್ದಾರೆ.

ನಗವಾರದ ಚಲಪತಿ (55) ಮತ್ತು ಬಿ. ಶಂಕರ್ (44) ಮೃತಪಟ್ಟವರು. ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿಯಿಂದ ತಂದಿದ್ದ ನಾಟಿ ಔಷಧ ಸೇವಿಸಿ ಅಸ್ವಸ್ಥರಾದ ಇವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂಗಲಿ ಠಾಣೆಯಲ್ಲಿ ದೂರು ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.