ADVERTISEMENT

ಮರಳು ಸಾಗಣೆ: 7 ಲಾರಿ ವಶ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2017, 7:16 IST
Last Updated 17 ನವೆಂಬರ್ 2017, 7:16 IST

ಕೋಲಾರ: ಜಿಲ್ಲೆಯ ವಿವಿಧೆಡೆ ಬುಧವಾರ ಕಾರ್ಯಾಚರಣೆ ನಡೆಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಪರವಾನಗಿ ಇಲ್ಲದೆ ಅಕ್ರಮವಾಗಿ ಗ್ರಾನೈಟ್‌ ಹಾಗೂ ಮರಳು ಸಾಗಿಸುತ್ತಿದ್ದ ಆರೋಪದ ಮೇಲೆ ಏಳು ಲಾರಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

‘ಜಿಲ್ಲೆಯ ತಲಗುಂದ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಭಾಗದಿಂದ ಗ್ರಾನೈಟ್‌ ಮತ್ತು ಫಿಲ್ಟರ್‌ ಮರಳನ್ನು ಮಾಲೂರು ಕೈಗಾರಿಕಾ ಪ್ರದೇಶ, ಬೆಂಗಳೂರು ಕಡೆಗೆ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದು ಕೋಲಾರ ತಾಲ್ಲೂಕಿನ ರಾಮಸಂದ್ರ ಗೇಟ್‌ ಬಳಿ ವಶಕ್ಕೆ ಪಡೆಯಲಾಗಿದೆ ಎಂದು ಇಲಾಖೆಯ ಹಿರಿಯ ಭೂವಿಜ್ಞಾನಿ ನಂಜುಂಡಸ್ವಾಮಿ ‘ಪ್ರಜಾವಾಣಿ’ಗೆ ತಿಳಿಸಿದರು. ಮಾಲೂರು ಮತ್ತು ವೇಮಗಲ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಲಾರಿ ಚಾಲಕರನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT