ADVERTISEMENT

ಮೂಲಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಮೇ 2017, 5:09 IST
Last Updated 14 ಮೇ 2017, 5:09 IST

ಕೆಜಿಎಫ್: ಮೂಲಸೌಕರ್ಯಗಳಿಲ್ಲದೆ ಸೊರಗುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮಂಜೂರಾಗಿರುವ ಕಟ್ಟಡವನ್ನು ಕೂಡಲೇ ಮುಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಮಾಜ ಸೇನೆ ಕಾರ್ಯಕರ್ತರು ಗುರುವಾರ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು.

ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕಾಲೇಜು ಪ್ರಸ್ತುತ ಸರ್ಕಾರಿ ಪ್ರಾಥಮಿಕ ಶಾಲೆಯ ಹಳೇ ಕಟ್ಟಡದಲ್ಲಿ ನಡೆಯುತ್ತಿದೆ. ಸರ್ಕಾರ ಹೊಸ ಕಾಲೇಜು ಕಟ್ಟಡಕ್ಕೆ ಹಣ ಬಿಡುಗಡೆ ಮಾಡಿದ್ದರೂ, ಕಾಮಗಾರಿ ವರ್ಷಗಟ್ಟಲೆ ನಡೆಯುತ್ತಿದೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗುತ್ತಿಗೆದಾರರ ಮೇಲೆ ಒತ್ತಡ ಹೇರಿ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು. ಮುಖಂಡರಾದ ಸೂಲಿಕುಂಟೆ ಆನಂದ್‌, ಬೇಟಪ್ಪ, ಶೋಭಾರಾಣಿ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.