ADVERTISEMENT

ಸಂವಿಧಾನದಿಂದ ಸಮಾಜ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2017, 4:54 IST
Last Updated 16 ಏಪ್ರಿಲ್ 2017, 4:54 IST

ಕೋಲಾರ: ‘ಡಾ.ಬಿ.ಆರ್.ಅಂಬೇಡ್ಕರ್ ರಚಿತ ಸಂವಿಧಾನದ ಮಾರ್ಗದರ್ಶನದಲ್ಲಿ  ಸಮಾಜ ಅಭಿವೃದ್ಧಿಯಾಗುತ್ತಿದೆ’ ಎಂದು ವಕೀಲ ಸತೀಶ್ ಅಭಿಪ್ರಾಯಪಟ್ಟರು. ನಗರದ ಸರ್ಕಾರಿ ಮಹಿಳಾ ಐಟಿಐ ಕಾಲೇಜಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅಂಗವಾಗಿ ಶುಕ್ರವಾರ ನಡೆದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ‘ಅಂಬೇಡ್ಕರ್ ಆಶಯಗಳಿಗೆ ವಿರುದ್ಧವಾಗಿ ಸಮಾಜ ಸಾಗುತ್ತಿದೆ. ಶಿಕ್ಷಣ, ಆರೋಗ್ಯ, ಖಾಸಗೀಕರಣವಾಗುತ್ತಿದೆ. ಇದಕ್ಕೆಲ್ಲ ಕಲುಷಿತ ರಾಜಕೀಯವೇ ಕಾರಣ’ ಎಂದು ಬೇಸರ ವ್ಯಕ್ತಪಡಿಸಿದರು.

ಎಸ್ಎಫ್ಐನ ಜಿಲ್ಲಾ ಘಟಕದ ಅಧ್ಯಕ್ಷ ವಾಸುದೇವರೆಡ್ಡಿ ಮಾತನಾಡಿ, ‘ಅಂಬೇಡ್ಕರ್ ಜಾತಿ, ಅಸ್ಪೃಶ್ಯತೆ, ಮೌಢ್ಯತೆ ವಿರುದ್ಧ ಹೋರಾಟ ನಡೆಸಿದವರು. ಅವರ ಆದರ್ಶ ತತ್ವಗಳನ್ನು ಮೈಗೂಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.ಕಾರ್ಯದರ್ಶಿ ಶ್ರೀಕಾಂತ್, ತರಬೇತುದಾರರಾದ ಸುಜಾತಮ್ಮ, ಶಿವಕುಮಾರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT