ADVERTISEMENT

29ರಂದು ಎಚ್‌.ಡಿ.ದೇವೇಗೌಡ ನಗರಕ್ಕೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2017, 10:58 IST
Last Updated 16 ನವೆಂಬರ್ 2017, 10:58 IST

ಶ್ರೀನಿವಾಸಪುರ: ‘ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ನ. 29ರಂದು ಪಟ್ಟಣಕ್ಕೆ ಬಂದು ಜೆಡಿಎಸ್‌ ಕಚೇರಿ ಉದ್ಘಾಟಿಸುವರು’ ಎಂದು ಜೆಡಿಎಸ್‌ ಮುಖಂಡ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.

ಪಟ್ಟಣದ ಕುವೆಂಪು ವೃತ್ತದ ಸಮೀಪ ಮಂಗಳವಾರ ಏರ್ಪಡಿಸಿದ್ದ ಜೆಡಿಎಸ್‌ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ‘ಅಂದು ಚೈತನ್ಯ ಜನ ಜಾಗೃತಿ ವೇದಿಕೆ ವತಿಯಿಂದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಿರುವ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸುವರು’ ಎಂದು ಹೇಳಿದರು.

‘ಬರಲಿರುವ ವಿಧಾನ ಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಸಭೆಗಳನ್ನು ನಡೆಸಲಾಗುವುದು. ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯ ಮಂತ್ರಿಯಾಗಿದ್ದಾಗ ಕೈಗೊಂಡಿದ್ದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ನೆನಪು ಮಾಡಲಾಗುವುದು. ಕುಮಾರಸ್ವಾಮಿ ಅವರ ಕೈ ಬಲಪಡಿಸಲು ಕೋರಲಾಗುವುದು’ ಎಂದು ಹೇಳಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಸದಸ್ಯರಾದ ತೂಪಲ್ಲಿ ಆರ್‌.ನಾರಾಯಣಸ್ವಾಮಿ, ಎಂ.ವಿ.ಶ್ರೀನಿವಾಸ್, ಗಣೇಶ್‌, ಮಾಜಿ ಸದಸ್ಯ ಜಿ.ಕೆ.ನಾಗರಾಜ್‌, ತಾಲ್ಲೂಕು ಪಂಚಾಯಿತಿ ಸದಸ್ಯ ರಾಜಶೇಖರರೆಡ್ಡಿ, ಕೆ.ಪಿ.ನಾಗೇಶ್‌, ರಾಮಚಂದ್ರೇಗೌಡ, ಶಿವಾರೆಡ್ಡಿ, ರಾಜಣ್ಣ, ಪಿ.ಆರ್‌.ವೆಂಕಟರೆಡ್ಡಿ ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.