ADVERTISEMENT

ಖಾಸಗಿ ಶಾಲೆ ವ್ಯಾಮೋಹ ಬಿಡಿ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2018, 7:03 IST
Last Updated 3 ಫೆಬ್ರುವರಿ 2018, 7:03 IST

ಮುಳಬಾಗಿಲು: ‘ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಸರ್ಕಾರ ಹಲವು ಸೌಲಭ್ಯ ನೀಡುತ್ತಿದೆ. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು’ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಗೀತಮ್ಮ ಸಲಹೆ ನೀಡಿದರು.

ತಾಲ್ಲೂಕಿನ ಕುರುಡುಮಲೆ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಮಾಲೂರು ಪಟ್ಟಣ ಪುರಸಭೆಯ ಕಚೇರಿಯಲ್ಲಿ ಶುಕ್ರವಾರ ಪುರಸಭಾಧ್ಯಕ್ಷ ಎಂ.ರಾಮಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪುರಸಭೆ ಸದಸ್ಯರ ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಹೊರ ನಡೆದ ಕಾಂಗ್ರೆಸ್ ಪಕ್ಷದ ಪುರಸಭಾ ಸದಸ್ಯರು. ಲ್ಲಿ ಶುಕ್ರವಾರ ನಡೆದ ಚಿಣ್ಣರ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿದೆ. ಜತೆಗೆ ಶಿಕ್ಷಣದ ಗುಣಮಟ್ಟ ಸುಧಾರಿಸಿದೆ ಎಂದರು.

‘ಖಾಸಗಿ ಶಿಕ್ಷಣ ಸಂಸ್ಥೆಗಳಂತೆ ಸರ್ಕಾರಿ ಶಾಲೆಗಳಲ್ಲೂ ಶಿಕ್ಷಣ ನೀಡಿದರೆ ಈ ಶಾಲೆಗಳು ಬಲಗೊಳ್ಳುತ್ತವೆ. ಸರ್ಕಾರಿ ಶಾಲೆಗಳನ್ನು ಕಡೆಗಣಿಸಿದ ಕಾರಣಕ್ಕೆ ಪೋಷಕರು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ದಾಖಲಿಸುತ್ತಿದ್ದಾರೆ. ಇದರಿಂದ ಮಕ್ಕಳ ದಾಖಲಾತಿ ಕುಸಿದು ಸರ್ಕಾರಿ ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಬಂದಿದೆ’ ಎಂದು ಜಿ.ಪಂ ಸದಸ್ಯ ವಿ.ಎಸ್.ಅರವಿಂದಕುಮಾರ್ ಕಳವಳ ವ್ಯಕ್ತಪಡಿಸಿದರು.

ADVERTISEMENT

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಗಂಗಿರೆಡ್ಡಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮಂಜುನಾಥ್, ಕೆಪಿಸಿಸಿ ಕಾರ್ಯದರ್ಶಿ ವಿ.ಮುನಿವೆಂಕಟಪ್ಪ, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸ್ವಾಮಿ, ಡಿವೈಎಸ್ಪಿ ಬಿ.ಕೆ.ಉಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪರಾಮು, ತಾ.ಪಂ ಮಾಜಿ ಅಧ್ಯಕ್ಷ ಶ್ರೀನಿವಾಸರೆಡ್ಡಿ, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ವಿ.ಜಗನ್ನಾಥ್, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಶಿವಣ್ಣ, ಸಿ.ಸೊಣ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.