ADVERTISEMENT

ಅಡವಿಭಾವಿಯಲ್ಲಿ ವಾಲ್ಮೀಕಿ ಜಯಂತಿ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2017, 8:30 IST
Last Updated 5 ನವೆಂಬರ್ 2017, 8:30 IST

ಕುಷ್ಟಗಿ ತಾಲ್ಲೂಕಿನ ಅಡವಿಭಾವಿ ಗ್ರಾಮದಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಶಾಸಕ ದೊಡ್ಡನಗೌಡ ಪಾಟೀಲ, ‘ಮಹರ್ಷಿ ಆದರ್ಶ ಮತ್ತು ಚಿಂತನೆಗಳನ್ನು ಪ್ರತಿಯೊಬ್ಬರೂ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಎಲ್ಲ ಜಯಂತಿಗಳಲ್ಲಿ ಎಲ್ಲ ಸಮುದಾಯದ ಜನರು ಭಾಗವಹಿಸುವ ಮೂಲಕ ಸಾಮಾಜಿಕ ಸಮಾನತೆ ಬೆಳೆಸಬೇಕು’ ಎಂದರು.

ವಾಲ್ಮೀಕಿ ಸಮುದಾಯಭವನ ನಿರ್ಮಾಣ, ಗ್ರಾಮದ ವಿದ್ಯುತ್ ಸಮಸ್ಯೆ ನಿವಾರಣೆಗೆ ಪ್ರಯತ್ನಿಸುವುದಾಗಿ ಪಾಟೀಲ ಭರವಸೆ ನೀಡಿದರು. ಅದಕ್ಕೂ ಪೂರ್ವದಲ್ಲಿ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಾಲ್ಮೀಕಿ ಭಾವಚಿತ್ರದ ಮೆರವಣಿಗೆಯಲ್ಲಿ ನೂರಾರು ಮಹಿಳೆಯರು ಕುಂಭಗಳನ್ನು ಹೊತ್ತು ಸಾಗಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಮಹೇಶ್, ವಿಜಯನಾಯಕ, ಹನುಮಗೌಡ ಪೊಲೀಸ ಪಾಟೀಲ, ವಾಲ್ಮೀಕಿ ಸಮಾಜದ ಜಿಲ್ಲಾ ಗೌರವ ಅಧ್ಯಕ್ಷ ಚಂದಪ್ಪ ತಳವಾರ, ಮಲ್ಲಿಕಾರ್ಜುನ ಚಳಗೇರಿ, ತಿಪ್ಪಣ್ಣ ಸಿದ್ದಾಪುರ, ಮುತ್ತಪ್ಪ ಬಳೂಟಗಿ, ಶಶಿಧರ ಕವಲಿ, ಮಹೇಶ ಕೊನಸಾಗರ, ರಮೇಶ ಕೊಳ್ಳಿ, ಹನುಮೇಶ ಹುರಕಿನ, ಎಪಿಎಂಸಿ ಅಧ್ಯಕ್ಷ ಬಾಲಪ್ಪ ಚಾಕ್ರಿ, ಗ್ರಾಮದ ಯುವಕರು, ಹಿರಿಯರು ಇದ್ದರು. ಡಿ.ಕೆ.ಮಾಳೆ ವಿಶೇಷ ಉಪನ್ಯಾಸ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.