ADVERTISEMENT

ಕುಡಿಯುವ ನೀರಿನ ಘಟಕ: ತರಬೇತಿ

ಕಾರ್ಯಾಗಾರದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2017, 5:24 IST
Last Updated 18 ಜನವರಿ 2017, 5:24 IST
ಕುಡಿಯುವ ನೀರಿನ ಘಟಕ: ತರಬೇತಿ
ಕುಡಿಯುವ ನೀರಿನ ಘಟಕ: ತರಬೇತಿ   

ಕೊಪ್ಪಳ:  ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ 101 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಲಾಗುವುದು ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.

ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ  ಕಚೇರಿಯಿಂದ ನಿರ್ವಹಿಸುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಕಾಮಗಾರಿಗಳ ಕುರಿತು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ 101 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ.  ಹೆಚ್ಚುವರಿಯಾಗಿ 101 ಘಟಕಗಳ ಸ್ಥಾಪನೆಗೆ ಅನುಮೋದನೆ ನೀಡಿದ್ದಾರೆ.

ಈಗ ಬರಗಾಲವಿದ್ದು, ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ನೀರಗಂಟಿಗಳು ಹೆಚ್ಚು ದಕ್ಷತೆಯಿಂದ `ಕಾರ್ಯನಿರ್ವಹಿಸುವಂತೆ ಅವರು ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್.ಬಿ ನಾಗರಳ್ಳಿ, ನಗರಸಭೆ ಅಧ್ಯಕ್ಷ ಮಹೇಂದ್ರ ಛೋಪ್ರಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜುಲ್ಲು ಖಾದ್ರಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಾಲಚಂದ್ರನ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಟಿ.ಕೃಷ್ಣಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.