ADVERTISEMENT

ಕೇಂದ್ರ ದ ಕಾರ್ಮಿಕ ವಿರೋಧಿ ನೀತಿ; ಆಕ್ರೋಶ

ಕುಷ್ಟಗಿ: ಸಿಐಟಿಯು ಕಾರ್ಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2017, 6:20 IST
Last Updated 21 ಜನವರಿ 2017, 6:20 IST
ಕೇಂದ್ರ ದ ಕಾರ್ಮಿಕ ವಿರೋಧಿ ನೀತಿ; ಆಕ್ರೋಶ
ಕೇಂದ್ರ ದ ಕಾರ್ಮಿಕ ವಿರೋಧಿ ನೀತಿ; ಆಕ್ರೋಶ   

ಕುಷ್ಟಗಿ: ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶುಕ್ರವಾರ ಪಟ್ಟಣದಲ್ಲಿ ಸಿಐಟಿಯುವ ಕಾರ್ಯಕರ್ತರು ಪ್ರತಿಭಟನೆ ನಡೆಸಿರು.

ಕಾರ್ಗಿಲ್‌ ವೀರಯೋಧ ಮಲ್ಲಯ್ಯ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ನಂತರ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಸುಮಾರು ಮೂರು ತಾಸುಗಳವರೆಗೆ ಧರಣಿ ನಡೆಸಿ ನಂತರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಅಕ್ಷರದಾಸೋಹ ಯೋಜನೆ ಸಹಾಯಕ ನಿರ್ದೇಶಕರಿಗೆ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ತಾಲ್ಲೂಕು ಘಟಕದ ಪ್ರಮುಖರಾದ ಕಲಾವತಿ ಮೆಣೆದಾಳ, ಗ್ರಾಮೀಣ                ಪ್ರದೇಶದ ಕೃಷಿಕೂಲಿಕಾರರು, ಅಸಂಘಟಿತ ಕಾರ್ಮಿಕರ ಬಡ ಕುಟುಂಬಗಳಿಗೆ ಸೇರಿದ ಮಹಿಳೆಯರು, ಮಕ್ಕಳ ಆರೋಗ್ಯ, ಶಿಕ್ಷಣ, ಪೌಷ್ಠಿಕ ಆಹಾರ ಯೋಜನೆ ಸೇರಿದಂತೆ ಗ್ರಾಮೀಣ ಅಭಿವೃದ್ಧಿಗೆ ಸಂಬಂಧಿಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಗಳ ಅನುಷ್ಠಾನದಲ್ಲಿ ಸ್ವಯಂ ಸೇವಕರು ಕೇವಲ ಗೌರವಧನದ ಆಧಾರದ ಮೇಲೆ ದುಡಿಯುತ್ತಿದ್ದಾರೆ ಆದರೆ ಅವರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಘೋಷಣೆ ಮಾಡಿಲ್ಲ ಎಂದು ಆರೋಪಿಸಿದರು.

ಸ್ವಯಂ ಸೇವಕರನ್ನು ನೌಕರರು ಎಂದು ಪರಿಗಣಿಸಬೇಕು, ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಟ ಕೂಲಿ ಕಾಯ್ದೆ ಅಡಿ ಕನಿಷ್ಠ ವೇತನ                  ನಿಗದಿಪಡಿಸಬೇಕು, ಮೇಲ್ವಿಚಾರಕಿಯರ ಹುದ್ದೆಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮೀಸಲಿ ಡಬೇಕು, ಮಿನಿ ಅಂಗನವಾಐಡಿ ಕೇಂದ್ರಗಳನ್ನು ಪೂರ್ಣಪ್ರಮಾಣದ ಕೇಂದ್ರಗಳನ್ನಾಗಿ ಪರಿವರ್ತಿಸಬೇಕು ಮತ್ತು ಮಾಹಿತಿ ಹಕ್ಕು ಕಾಯ್ದೆಯಿಂದ ಅಂಗನವಾಡಿ ಕೇಂದ್ರಗಳನ್ನು ಹೊರಗಿಡುವಂತೆ ಒತ್ತಾಯಿಸುವ ಬೇಡಿಕೆಗಳ ಮನವಿಯನ್ನು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸಲ್ಲಿಸಿದರು.

ಅಂಗನವಾಡಿ, ಸಿಪಿಎಂ, ಅಕ್ಷರದಾಸೋಹ ಯೋಜನೆ ಸಿಬ್ಬಂದಿ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಬ್‌ ಇನ್‌ಸ್ಪೆಕ್ಟರ್‌ ವಿಶ್ವನಾಥ ಹಿರೇಗೌಡರ ಬಂದೋಬಸ್ತ್‌ ವ್ಯವಸ್ಥೆ ಕಲ್ಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.