ADVERTISEMENT

ಗ್ರಾಮಕ್ಕೆ ಸಂಸದ ಸಂಗಣ್ಣ ಭೇಟಿ: ಸಮಾಲೋಚನೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2015, 8:18 IST
Last Updated 4 ಜುಲೈ 2015, 8:18 IST

ಮುನಿರಾಬಾದ್‌: ಸಮೀಪದ ಹಿರೇಬಗನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಬಗನಾಳ, ಚಿಕ್ಕಬಗನಾಳ ಮತ್ತು ಅಲ್ಲಾನಗರ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ್ದ ಸಂಸದ ಸಂಗಣ್ಣ ಕರಡಿ, ಶೌಚಾಲಯ ಮತ್ತು ಘನತ್ಯಾಜ್ಯ ವಿಲೇವಾರಿ ಬಗ್ಗೆ ಸಮಾಲೋಚನೆ ನಡೆಸಿದರು.

ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಇಂಗ್ಲಿಷ್‌ ಮತ್ತು ಯೋಗ ಶಿಕ್ಷಣ ತರಬೇತಿಗೆ ಒತ್ತು ನೀಡುವಂತೆ ತಿಳಿಸಿದರು.ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗುರುಸಿದ್ದಪ್ಪ, ಪಂಚಾಯಿತಿ ವ್ಯಾಪ್ತಿಯಲ್ಲಿ 1400 ಶೌಚಾಲಯ ಪೂರ್ಣಗೊಳಿಸಲಾಗಿದ್ದು ಇನ್ನು 400 ಬಾಕಿ ಇದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೃಷ್ಣ ಉದಪುಡಿ, ತಾಲ್ಲೂಕು ಪಂಚಾಯಿತಿ ಇಒ ಕೃಷ್ಣಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಹೇಮಣ್ಣ ದೇವರಮನಿ ಮುಂತಾದವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.