ADVERTISEMENT

ಪರಿಸರ ಮಾಲಿನ್ಯದಿಂದ ರೋಗ

​ಪ್ರಜಾವಾಣಿ ವಾರ್ತೆ
Published 4 ಜುಲೈ 2015, 8:20 IST
Last Updated 4 ಜುಲೈ 2015, 8:20 IST

ಕೊಪ್ಪಳ: ಸ್ವಚ್ಛ ವಾತಾವರಣದಲ್ಲಿ ಮಾತ್ರ ಸ್ವಚ್ಛ ಮನಸ್ಸು ನಿರ್ಮಾಣವಾಗಲು ಸಾಧ್ಯ ಎಂದು ಬನ್ನಿಕಟ್ಟಿ ಸರ್ಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪರಮಾನಂದ ಯಾಳಗಿ ಹೇಳಿದರು.

ನಗರದ ಬನ್ನಿಕಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ, ಆದರ್ಶ ವಿದ್ಯಾಲಯದ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರಿಸರ ಮಾಲಿನ್ಯದಿಂದ ರೋಗ ಬಂದ ನಂತರ ಜಾಗೃತರಾಗುವುದಕ್ಕಿಂತ ಪೂರ್ವದಲ್ಲಿಯೇ ಕಾಯಿಲೆಗಳ ಕುರಿತು ಜಾಗೃತರಾಗುವುದು ಒಳ್ಳೆಯದು. ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ.

ಶಾಲೆ ಆವರಣದಲ್ಲಿ ಮಕ್ಕಳು ಶಾಲಾ ವಾತಾವರಣ ಹಸಿರಿನಿಂದ ಕಂಗೊಳಿಸಲು ಸ್ವಚ್ಛ ಪರಿಸರ ಉಳಿಸುವ ಕಾರ್ಯದಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕು.  ಅದು ಮಾದರಿಯಾಗಬೇಕು ಎಂದರು.

ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಬಿ.ರುದ್ರೇಶ ಮಾತನಾಡಿ, ನೀರು, ಶಕ್ತಿ, ಗಾಳಿ, ಮಣ್ಣು, ಆರೋಗ್ಯ ನೈರ್ಮಲ್ಯ ಜತೆಗೆ ಶಾಲಾ ಪರಿಸರದ ಬಗ್ಗೆ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಿ ಪರಿಸರ ಸಮತೋಲನವನ್ನು ಕಾಪಾಡುವಲ್ಲಿ ಮಕ್ಕಳಲ್ಲಿ ಸುತ್ತಮುತ್ತಲಿನ ಹಾಗೂ ಅದರ ರಕ್ಷಣೆ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.

ನಗರಸಭಾ ಸದಸ್ಯ ಪ್ರಾಣೇಶ ಮಹೇಂದ್ರಕರ್, ಮುಖ್ಯಶಿಕ್ಷಕ ಕರಿಬಸಪ್ಪ ಪಲ್ಲೇದ,  ಮಹಾಂತೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.