ADVERTISEMENT

ಬಾಲ್ಯವಿವಾಹ ನಡೆದರೆ ಕಾನೂನು ಕ್ರಮ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2017, 6:30 IST
Last Updated 25 ಏಪ್ರಿಲ್ 2017, 6:30 IST
ಕೊಪ್ಪಳ ತಾಲ್ಲೂಕು ಆಗಳಕೇರಾ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಬಾಲ್ಯವಿವಾಹ ತಡೆ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ ಮಾತನಾಡಿದರು
ಕೊಪ್ಪಳ ತಾಲ್ಲೂಕು ಆಗಳಕೇರಾ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಬಾಲ್ಯವಿವಾಹ ತಡೆ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ ಮಾತನಾಡಿದರು   

ಕೊಪ್ಪಳ: ‘ಬಾಲ್ಯ ವಿವಾಹ ನಡೆಸಿದ ಪಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇಮಾಲಪ್ಪ ಡಿ.ಕಂದಳ್ಳಿ ಹೇಳಿದರು.

ತಾಲ್ಲೂಕಿನ ಆಗಳಕೇರಾದಲ್ಲಿ ಇತ್ತೀಚೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯಿತಿ, ಮಹಿಳಾ ಮತ್ತು ಮಕ್ಕಳ ಅಭಿ ವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಆಶ್ರಯದಲ್ಲಿ ಬಾಲ್ಯ ವಿವಾಹ ತಡೆಗಾಗಿ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತ ನಾಡಿದರು.

‘ಬಾಲ್ಯ ವಿವಾಹದ ಬಗ್ಗೆ ಸಮು ದಾಯದಲ್ಲಿ ಈಗಾಗಲೇ ಜಾಗೃತಿ ಮೂಡಿದ್ದರೂ  ಅಲ್ಲಲ್ಲಿ ಕದ್ದು ಮುಚ್ಚಿ ಮಕ್ಕಳ ಮದುವೆ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗುತ್ತಿವೆ. ಇಂಥ ಪ್ರಕರಣಗಳು ಕಂಡುಬಂದಲ್ಲಿ ತಪ್ಪಿದಲ್ಲಿ ಅಂತಹ ಪಾಲಕರ ವಿರುದ್ಧ ಪ್ರಕರಣ ದಾಖಲಿಸಲು ಕಾನೂನಿನಲ್ಲಿ ಅವ ಕಾಶವಿದೆ’ ಎಂದರು.

ADVERTISEMENT

ಮಕ್ಕಳ ವಿಶೇಷ ಪೊಲೀಸ್‌ ಘಟಕದ ಬಸಪ್ಪ ಹಾದಿಮನಿ ಮಾತನಾಡಿ, ‘ಪೊಲೀಸ್ ಇಲಾಖೆ ಹಲವಾರು ಬಾಲ್ಯ ವಿವಾಹಗಳನ್ನು ತಡೆಗಟ್ಟಿದೆ. ನಮ್ಮ ಸಲಹೆ ಮೀರಿಯೂ ಮದುವೆ ಮಾಡಿದ ಪಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ’ ಎಂದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೋಹಿಣಿ ಕೊಟಗಾರ ಮಾತನಾಡಿ, ‘ಬಾಲ್ಯ ವಿವಾಹ ನಿಷೇಧ ಕಾಯ್ದೆ ಕಲಂ 9, 10, 1ರ ಅಡಿಯಲ್ಲಿ ಬಾಲ್ಯ ವಿವಾಹ ಮಾಡಿದ, ಮಾಡಿಕೊಂಡ ವ್ಯಕ್ತಿಗಳು, ಆಯೋಜಕರು, ಪೂಜಾರಿ, ವಾದ್ಯ ನುಡಿ ಸಿದವರು, ಅಡುಗೆಯವರು ಹಾಗೂ ಭಾಗವಹಿಸಿದವರೂ ಅಪರಾಧಿಗಳು. ಈ ಹಿಂದೆ ಬಾಲ್ಯವಿವಾಹ ಪ್ರಕರಣಗಳಲ್ಲಿ ಜಿಲ್ಲೆ ಮೊದಲನೇ ಸ್ಥಾನದಲ್ಲಿ ಇತ್ತು. ಆದರೆ ಇತ್ತೀಚೆಗೆ ಮಕ್ಕಳ ರಕ್ಷಣಾ ಯೋಜನೆ ಸಹಿತ ಹಲವಾರು ಇಲಾಖೆ ಗಳ ಕಾರ್ಯಾಚರಣೆಯ ಪರಿಣಾಮ ದಿಂದಾಗಿ ಜಿಲ್ಲೆಯು ಬಾಲ್ಯವಿ ವಾಹ ಗಳನ್ನು ತಡೆಗಟ್ಟಿದ ಪ್ರಕರಣಗಳಲ್ಲಿ ರಾಜ್ಯದ ಲ್ಲಿ ಮೊದಲ ಸ್ಥಾನದಲ್ಲಿ ಇದೆ. ನಮ್ಮ ಇಲಾಖೆಯ ಜೊತೆಗೆ ಶಿಕ್ಷಕರು, ಮಕ್ಕಳು ಕೈಜೋಡಿಸಿದಲ್ಲಿ ಬಾಲ್ಯ ವಿವಾ ಹ ಎಂಬ ಸಾಮಾಜಿಕ ಪಿಡುಗನ್ನು ಜಿಲ್ಲೆ ಯಿಂದ ತೊಲಗಿಸಬಹುದು’ ಎಂದರು.

ಆಗಳಕೇರ ಗ್ರಾಮ ಪಂಚಾಯಿತಿ ಸದಸ್ಯೆ ವಿಜಯಲಕ್ಷ್ಮೀ ಅಧ್ಯಕ್ಷತೆ ವಹಿಸಿದ್ದರು, ಅಂಗನವಾಡಿ ಮೇಲ್ವಿಚಾರಕಿ ಪುಷ್ಪಾ, ಗ್ರಾಮ ಪಂಚಾಯಿತಿ ಸದಸ್ಯ ರಾದ ತಿಪ್ಪಣ್ಣ ಹಾಗೂ ಹನುಮಂತಪ್ಪ ಭಜಂತ್ರಿ, ಡಾ.ಆರ್.ಡಿ.ಮುಲ್ಲಾ, ಪಿಡಿಒ ನಾಗರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.