ADVERTISEMENT

ವಿಜೃಂಭಣೆಯ ಅಂಬೇಡ್ಕರ್‌ ಭಾವಚಿತ್ರ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2017, 9:58 IST
Last Updated 15 ಏಪ್ರಿಲ್ 2017, 9:58 IST

ತಾವರಗೇರಾ :  ಇಡೀ ವಿಶ್ವವೇ ಮೆಚ್ಚು ವಂತಹ ಸಂವಿಧಾನವನ್ನು ಡಾ.ಬಿ. ಆರ್.ಅಂಬೇಡ್ಕರ್‌ ಅವರು ರಚಿಸಿದ್ದಾರೆ ಎಂದು ಪಟ್ಟಣ ಪಂಚಾಯತಿ ಉಪಾಧ್ಯಕ್ಷ ನಾರಾಯಣಗೌಡ ಮೆದಿಕೇರಿ ಹೇಳಿದರು.

ಸ್ಥಳಿಯ ಪಟ್ಟಣ ಪಂಚಾಯಿತಿ ವತಿಯಿಂದ ಶುಕ್ರವಾರ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್‌ ಅವರ 126ನೇ ಜಯಂತಿ ಮತ್ತು ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಂ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲರೂ ಶಿಕ್ಷಣ ಪಡೆದಾಗ ಮಾತ್ರ ಸಮಾಜ ಅಭಿವೃದ್ಧಿಯಾಗುತ್ತದೆ ಎಂದು ಅಂಬೇಡ್ಕರ್‌ ತಿಳಿದಿದ್ದರು. ಎಲ್ಲರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು.  ಶಿಕ್ಷಣ, ಸಂಘಟನೆ ಮತ್ತು ಹೋರಾಟ ದಿಂದ ಮಾತ್ರ ಸಮಾಜದಲ್ಲಿ ಪರಿವರ್ತನೆ ತರಲು ಸಾಧ್ಯ. ಅಂಬೇಡ್ಕರ್‌ ಕನಸಿನ ಸಮಾನತೆಯ ಸಮಾಜವನ್ನು ನನಸು ಮಾಡಲು ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ADVERTISEMENT

ಪಟ್ಟಣ ಪಂಚಾಯಿತಿ ಮುಖ್ಯಾಧಿ ಕಾರಿ ಎಸ್.ಸಿ.ಸೂಗೂರು ಪ್ರಾಸ್ತಾವಿ ಕವಾಗಿ ಮಾತನಾಡಿದರು.   ಪಿಎಸ್‌ಐ ಅಮರೇಶ ಹುಬ್ಬಳ್ಳಿ, ದಲಿತ ಮುಖಂಡ ಆನಂದ ಭಂಡಾರಿ, ಪಟ್ಟಣ ಪಂಚಾಯಿತಿ ಸದಸ್ಯ ಚಂದ್ರಶೇಖರ ನಾಲ್ತವಾಡ ಡಾ.ಬಿ.ಆರ್.ಅಂಬೇಡ್ಕರ್‌ ಮತ್ತು ಬಾಬು ಜಗಜೀವನರಾಂ ಜೀವನ ಚರಿತ್ರೆ ಕುರಿತು ಮಾತಮಾಡಿದರು.

ಎಸ್ಎಂವಿ ಕಾಲೇಜಿನ ಪ್ರಾಚಾರ್ಯ ಲಕ್ಷ್ಮಣ ವಗರನಾಳ ಉಪನ್ಯಾಸ ನೀಡಿ ದರು.  ಬೆಳಿಗ್ಗೆ ಅಂಬೇಡ್ಕರ್‌ ವೃತ್ತದಲ್ಲಿ  ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮರಿಯ ಮ್ಮ ದೇವರಮನಿ  ಅಂಬೇಡ್ಕರ್‌ ಪ್ರತಿಮೆಗೆ ಹೂ ಮಾಲೆ ಮತ್ತು ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.  ಪಟ್ಟಣ ಪಂಚಾಯತಿ ಸದಸ್ಯ ಶ್ಯಾಮಣ್ಣ ಸುಣಗಾರ ನಿರೂಪಿಸಿದರು. ರಾಘವೇಂದ್ರ ನಾಯಕ್ ಸ್ವಾಗತಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.