ADVERTISEMENT

ಸಂವಿಧಾನ ಬದಲಾಯಿಸಲು ಹೆಗಡೆ ಯಾರು?

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2017, 7:32 IST
Last Updated 27 ಡಿಸೆಂಬರ್ 2017, 7:32 IST

ಕೊಪ್ಪಳ: ‘ಸಂವಿಧಾನವನ್ನು ಬದಲಾವಣೆ ಮಾಡಲು ಅನಂತಕುಮಾರ್ ಹೆಗಡೆ ಯಾರು’ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಪ್ರಶ್ನಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸಚಿವರಾಗಿ ಸಂವಿಧಾನದ ಅಡಿಯಲ್ಲಿಯೇ ಪ್ರಮಾಣವಚನ ಸ್ವೀಕರಿಸಿ, ಈಗ ಸಂವಿಧಾನವನ್ನೇ ಬದಲಾಯಿಸುತ್ತೇವೆ ಎಂಬ ಅವರ ಹೇಳಿಕೆಯನ್ನು ಖಂಡಿಸುತ್ತೇನೆ. ಹೆಗಡೆ ಸಚಿವರಾಗಿ ಮುಂದುವರಿಯಲು ಅನರ್ಹರು’ ಎಂದು ಟೀಕಿಸಿದರು.

‘ಮನುವಾದವನ್ನು ಮತ್ತೆ ತರಲು ಹವಣಿಸಲಾಗುತ್ತಿದೆ. ಏನೇ ಮಾಡಿದರೂ ಸಂವಿಧಾನವನ್ನು ಯಾರೂ ಬದಲಾವಣೆ ಮಾಡಲು ಸಾಧ್ಯವಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.