ADVERTISEMENT

ಸರ್ಕಾರದ ಯೋಜನೆಗಳ ಮಾಹಿತಿ ಮನೆಮನೆಗೆ ತಲುಪಿಸಿ: ತಂಗಡಗಿ

​ಪ್ರಜಾವಾಣಿ ವಾರ್ತೆ
Published 11 ಜುಲೈ 2017, 7:49 IST
Last Updated 11 ಜುಲೈ 2017, 7:49 IST

ಕಾರಟಗಿ: ‘ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಕನಕಗಿರಿ ಕ್ಷೇತ್ರದಲ್ಲಿ ಕಳೆದ 9 ವರ್ಷದ ಅವಧಿಯಲ್ಲಿಯ ಅಭಿವೃದ್ಧಿ ಕಾರ್ಯಗಳ ಸಮಗ್ರ ಮಾಹಿತಿಯನ್ನು ಕಾರ್ಯಕರ್ತರು ಜನರ ಮನೆ, ಮನಗಳಿಗೆ ತಲುಪಿಸಬೇಕು’ ಎಂದು ಶಾಸಕ ಶಿವರಾಜ್ ತಂಗಡಗಿ ಹೇಳಿದರು.

ಸೋಮವಾರ ನಗರ ಘಟಕದ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಅವರು, ಅಂತರ್ಜಲ ಹೆಚ್ಚಳಕ್ಕಾಗಿ ಕೆರೆ ತುಂಬುವ ಯೋಜನೆ, ಆರ್ಥಿಕ, ಸಾಮಾಜಿಕ, ಔದ್ಯೋಗಿಕವಾಗಿ ಬೆಳೆಯಲು ರೈಸ್ ಟೆಕ್ನಾಲಜಿ ಪಾರ್ಕ್, ಕ್ಷೇತ್ರದಲ್ಲಿ ಕನಕಗಿರಿ ಮತ್ತು ಕಾರಟಗಿ ತಾಲ್ಲೂಕು ಘೋಷಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಬೇಕು’ ಎಂದರು.

‘ಕ್ಷೇತ್ರದಲ್ಲಿ ಬಿಜೆಪಿಯಿಂದ ಯಾವುದೇ ಕೆಲಸ ನಡೆದಿಲ್ಲ. ಆದರೆ, ಈಗಾಗಲೆ ಮನೆ, ಮನೆಗೆ ತೆರಳಿ ಸಾಧನೆ ವಿವರಿಸಿ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ. ನಮ್ಮ ಕಾರ್ಯಕರ್ತರು ಇದಕ್ಕೆ ತಡೆ ಹಾಕಬೇಕು’ ಎಂದರು.

ADVERTISEMENT

ಕಾರಟಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಂಬಣ್ಣ ನಾಯಕ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಶರಣಬಸವರಾಜ ರೆಡ್ಡಿ, ಕನಕಗಿರಿ ಬ್ಲಾಕ್ ಅಧ್ಯಕ್ಷ ರವಿ ನಂದಿಹಳ್ಳಿ, ವಿಶೇಷ ಎಪಿಎಂಸಿ ಅಧ್ಯಕ್ಷ ಶಶಿಧರಗೌಡ, ಮಾಜಿ ಅಧ್ಯಕ್ಷ ಶಿವರೆಡ್ಡಿ ನಾಯಕ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್. ಈಶಪ್ಪ, ಮುಖಂಡರಾದ  ಶರಣಪ್ಪ ಪರಕಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.