ADVERTISEMENT

ಹೆಬ್ಬಾಳಕರ್ ಗಡಿಪಾರಿಗೆ ಕರವೇ ಆಗ್ರಹ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2017, 6:52 IST
Last Updated 1 ಸೆಪ್ಟೆಂಬರ್ 2017, 6:52 IST

ಗಂಗಾವತಿ: ರಾಜ್ಯದ ಹಿತಾಸಕ್ತಿಗೆ ಧಕ್ಕೆ ತರುವ ರೀತಿಯಲ್ಲಿ ಹೇಳಿಕೆ ನೀಡಿರುವ ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಕೂಡಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾಯರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆಯನ್ನು ನಡೆಸಿದರು.

ಸಂಘಟನೆಯ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಪಂಪಣ್ಣ ನಾಯಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಸಂಘಟಕರು, ನ್ಯಾಯಾಲಯದ ಮುಂದಿರುವ ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದಿಂದ ಮೆರವಣಿಗೆ ಆರಂಭಿಸಿ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಕೆಲಕಾಲ ಧರಣಿ ನಡೆಸಿ, ಲಕ್ಷ್ಮಿ ಹೆಬ್ಬಾಳಕರ್ ಪ್ರತಿಕೃತಿಯನ್ನು ದಹಿಸಿದರು.

ಪಂಪಣ್ಣ ನಾಯಕ್ ಮಾತನಾಡಿ, ಮಹಾರಾಷ್ಟ್ರ ಜನರನ್ನು ತೃಪ್ತಿಪಡಿಸುವ ನಿಟ್ಟಿನಲ್ಲಿ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗುವ ರೀತಿಯಲ್ಲಿ ಹೇಳಿಕೆ ನೀಡಿರುವುದು ಅಪರಾಧ. ರಾಜ್ಯಗಳ ಮಧ್ಯೆ ಸಾಮರಸ್ಯ ಕದಡುವ ರೀತಿಯಲ್ಲಿ ಹೇಳಿಕೆ ನೀಡಿದ ಆರೋಪದ ಮೇಲೆ ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದರು.

ADVERTISEMENT

ಸಂಘಟನೆಯ ಖಾಜಾವಲಿ, ಶಂಕರ್ ಪೂಜಾರಿ, ಮಹೇಂದ್ರಸಿಂಗ್, ರಮೇಶ ಜೋಗೀನ್, ದೇವಪ್ಪ, ಅಂಜಿ ಆಟೋ, ಹುಲುಗಪ್ಪ, ಷಣ್ಮುಖ, ಉಮೇಶ, ಪರಶುರಾಮ, ಶಾಮಣ್ಣ, ಯಲ್ಲಪ್ಪ, ವೇಲು, ರವಿ, ಅಂಜನೇಯ, ಖಾಜಾ, ಸಿರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.